ಸದಾಶಿವ ಆಯೋಗ ಶಿಫಾರಸು ಖಂಡನೀಯ

press meet
Published on

ಕುಕನೂರು: ಬಂಜಾರ, ಭೋವಿ, ಕೊರಮ ಹಾಗೂ ಕೊರಚ ಸಮಾಜಕ್ಕೆ ಎಲ್ಲ ರಾಜಕೀಯ ಪಕ್ಷಗಳಿಂದ ಅನ್ಯಾಯವಾಗಿದೆ ಎಂದು ಗೋರ್ ಸೇನಾ ರಾಜ್ಯ ಪ್ರಧಾನ ಕಾರ್ಯಾದರ್ಶಿ ಸುರೇಶ ಬಳೂಟಗಿ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಅವೈಜ್ಞಾನಿಕ ವರದಿಯಾದ ನಿವೃತ್ತ ನ್ಯಾ.ಎ.ಜೆ. ಸದಾಶಿವ ಆಯೋಗ ಜಾರಿ ಕುರಿತು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಬಂಜಾರ, ಭೋವಿ, ಕೊರಮ ಹಾಗೂ ಕೊರಚ ಇನ್ನುಳಿದ 97 ಜಾತಿಗಳಿಗೆ ಅನ್ಯಾಯವಾಗಿದೆ ಎಂದರು.

ಬಿಜೆಪಿ ಸರ್ಕಾರ ಈ ವರದಿಯನ್ನು ಕೇಂದ್ರಕ್ಕೆ ಶಿಪಾರಸು ಮಾಡಿತ್ತು, ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ತೋರಿಸಿದ್ದೇವೆ. ಇದೀಗ ಈ ಸಾಹಸಕ್ಕೆ ಕಾಂಗ್ರೆಸ್ ಕೈಹಾಕಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡಲ್ಲಿದ್ದೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಶಿವಕುಮಾರ ಬಳಗೇರಿ, ಕೃಷ್ಣಪ್ಪ, ವಿಶ್ವನಾಥ ಕುಣಕೇರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net