ಆಯೋಗದ ವರದಿ ಜಾರಿಗೆ ಆಗ್ರಹ

CLK MANAVI
Published on

ಚಳ್ಳಕೆರೆ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಬುಧವಾರ ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ಅವರಿಗೆ ಮನವಿ ಸಲ್ಲಿಸಿದರು.
ಬಹುಸಂಖ್ಯಾತವಾಗಿರುವ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಜಾರಿಯಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗಲು ಸಾಧ್ಯವಿದೆ. ಸುಪ್ರೀಂ ಕೋರ್ಟ್ ಹೇಳಿರುವಂತೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ತಾಪಂ ಮಾಜಿ ಸದಸ್ಯ ಎನ್.ನರಸಿಂಹಯ್ಯ, ಸೇನೆ ತಾಲೂಕಾಧ್ಯಕ್ಷ ನನ್ನಿವಾಳ ಬಸವರಾಜ, ಮುತ್ತುರಾಜ್, ಕೊಲ್ಲಯ್ಯ, ಮಂಜುನಾಥ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net