ವಿ.ಶ್ರೀನಿವಾಸಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಗಿದೆ

BOMMAI
Published on

ಮಾಜಿ ಸಚಿವರು, ಸಂಸದರಾದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ದುಃಖವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶಾಸಕರಾಗಿ, ಸಂಸದರಾಗಿ ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯ ಮಾಡುವ ಮೂಲಕ ಜನಾನುರಾಗಿಯಾಗಿದ್ದರು. ಶ್ರೀನಿವಾಸಪ್ರಸಾದ ಅವರ ಅಗಲಿಕೆಯಿಂದ ರಾಜ್ಯದ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net