ಸಮಾಜ ಸೇವಾ ಸಹಕಾರಿಗೆ ಸಾಧನಾ ಪುರಸ್ಕಾರ

New Project (11)
Published on

ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ಪ್ರಶಸ್ತಿ ಸ್ವೀಕರಿಸಿತು.

ಸಮಾಜ ಸೇವಾ ಸಹಕಾರಿ ಸಂಘ 2024-25ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ರೂ. ವ್ಯವಹಾರ ನಡೆಸಿ 5.04 ಕೋಟಿ ಲಾಭ ಗಳಿಸಿದೆ. ಸಂಘದ ದುಡಿಯುವ ಬಂಡವಾಳ 259.66 ಕೋಟಿ ರೂ. ಆಗಿರುತ್ತದೆ ಮತ್ತು ಆಡಿಟ್ ವರ್ಗಿಕರಣದಲ್ಲಿ ಸತತ ‘ಎ’ ಶ್ರೇಣಿಯನ್ನು ಪಡೆದಿದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಸತತ ನಾಲ್ಕನೇ ಬಾರಿ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು.

ಸಂಘ ಅಧ್ಯಕ್ಷ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಸಂಘದ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ್ ಬಿ.ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಕಿರಣ್ ಕುಮಾರ್ ಎ., ಅರುಣ್ ಕುಮಾರ್ ಕೆ. ಮತ್ತು ಸಿಬ್ಬಂದಿ ವಸಂತ ಎಂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್.ರಮೇಶ್, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ರಾಜರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ ಕೋಟ್ಯಾನ್, ಕೆ.ಜೈರಾಜ್ ಬಿ. ರೈ ಮೊದಲಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net