20 ರಂದು ಹೊಸಪೇಟೆಯಲ್ಲಿ ಸಾಧನಾ ಸಮಾವೇಶ

Sadhana conference in Hospet on the 20th
ಇಳಕಲ್ಲನ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿದರು. ಸುಧಾರಾಣಿ ಸಂಗಮ, ಭಾಗ್ಯಶ್ರೀ ರೇವಡಿ, ಅಬ್ದುಲ್‌ರಜಾಕ ತಟಗಾರ, ಗಂಗಾಧರ ದೊಡ್ಡಮನಿ, ವೆಂಕಟೇಶ ಸಾಕಾ ಇದ್ದಾರೆ.
Published on

ಇಳಕಲ್ಲ (ಗ್ರಾ): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮೇ 20 ರಂದು ಸಿದ್ದರಾಮಯ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಸಕ್ರಿಯರಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಸಂಪುಟ ಸಚಿವರು ಭಾಗವಹಿಸಲಿರುವ ಈ ಸಮಾವೇಶಕ್ಕೆ ಹುನಗುಂದ ವಿಧಾನಸಭೆ ಕ್ಷೇತ್ರದಿಂದ ಹತ್ತು ಸಾವಿರ ಜನ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಸಂಗಮ, ಹುನಗುಂದ ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಮತ್ತು ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್‌ರಜಾಕ ತಟಗಾರ, ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ದೊಡ್ಡಮನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೆಂಕಟೇಶ ಸಾಕಾ, ಅಂಬೇಡ್ಕರ್ ಹಿತರಕ್ಷಣಾ ಸಮಿತಿ ಅಧ್ಯಕ್ಷ ಶರಣಪ್ಪ ಆಮದಿಹಾಳ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net