ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆ ಸಫಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಕರ್ಯ ಒದಗಿಸಲು ಡಿಸಿ ಸೂಚನೆ

raichur
raichur
Published on

ರಾಯಚೂರು ಜಿಲ್ಲೆಯಲ್ಲಿನ ಸಫಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ.,ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾದಿಕಾರಿಗಳ ಭವನದಲ್ಲಿ ಶನಿವಾರ ಸಫಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಗುತ್ತಿಗೆ ಸಫಾಯಿ ಕರ್ಮಚಾರಿಗಳಿಗೆ ಗುತ್ತಿಗೆ ಏಜೆನ್ಸಿದಾರರು ಸಮಯಕ್ಕೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯಗಳನ್ನು ವಿತರಿಸುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.

ವೇತನದೊಂದಿಗೆ ಇಎಸ್‌ಐ, ಪಿಎಫ್ ಪಾವತಿಸುವ ಬಗ್ಗೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು.

ನಗರದ ಸಿಯಾತಲಾಬ್‌ನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ನಿರ್ಮಾಕ್ಕಾಗಿ ಕೆಕೆಆರ್‌ಡಿಬಿಯ ಅನುದಾನದಲ್ಲಿ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ,ಎಸ್ಪಿ ಪುಟ್ಟಮಾದಯ್ಯ ಎಂ., ಐಎಎಸ್ ಪ್ರೊಬೆಷನರಿ ಅಧಿಕಾರಿ ಪುರುರಾಜ್ ಸಿಂಗ್, ಜಿಪಂ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಲೆಕ್ಕಾಧಿಕಾರಿ ವಿಜಯಶಂಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಸಿಂಧು, ಸಮಿತಿ ಸದಸ್ಯರಾದ ಮಂಜುನಾಥ, ನೀಲಕಂಠ, ಶಾಂತಪ್ಪ, ಅನಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net