

ಮೈಸೂರು: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಸಫಾರಿ ವಾಹನಗಳು ನಾಗರಹೊಳೆ ವನ್ಯಜೀವಿ ವಲಯದ ಸಫಾರಿ ವಲಯದ ರಸ್ತೆಗಳಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಮೇ 28 ರಿಂದ ಮಳೆ ನಿಲ್ಲುವವರೆಗೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಾಣಚ್ಚಿ ಗೇಟ್ ಹಾಗೂ ವೀರನಹೊಸಹಳ್ಳಿ ಗೇಟ್‌ನಿಂದ ಇಲಾಖಾ ಸಫಾರಿ ಸ್ಥಗಿತಗೊಳಿಸಲಾಗಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ದಮ್ಮನಕಟ್ಟೆ (ಕಬಿನಿ) ಸಫಾರಿ ಎಂದಿನಂತೆ ಮುಂದುವರೆಯುತ್ತದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.