ಸಾಗರ ಜಿಲ್ಲೆ ಮಾಡೋದಾದ್ರೆ ಸಿದ್ದಾಪುರ ಬಿಟ್ಟುಕೊಡಲ್ಲ

Anantmurti Hegde - Copy
Published on

ಶಿರಸಿ: ಸಿದ್ದಾಪುರ ಹಾಗೂ ಬನವಾಸಿಯನ್ನು ಸೇರಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದೆ ಎಂದು ಕದಂಬ ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆ ಇದೆ. ಅವರ ಪ್ರಯತ್ನ ಮುಂದುವರೆದರೆ, ಪಕ್ಷಾತೀತ ಹೋರಾಟ ನಡೆಸುತ್ತೇವೆ ಎಂದರು.

ಕಳೆದ 30 ವರ್ಷಗಳಿಂದ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಒಳಗೊಂಡು ಶಿರಸಿ ಜಿಲ್ಲೆಯಾಗಬೇಕೆಂಬ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರವು ಡಿ.31 ರ ಒಳಗಡೆ ತಾಲೂಕು ರಚನೆ ಹಾಗೂ ಜಿಲ್ಲೆ ರಚನೆ ಪಟ್ಟಿ ನೀಡಿ ಎಂದು ಕೇಳಿರುವುದನ್ನು ನಾವು ಕೇಳಿ ಸಂತೋಷಗೊAಡಿದ್ದೆವು. ಶಿರಸಿ ಜಿಲ್ಲೆಯಾಗುತ್ತದೆ ಎಂಬ ವಿಶ್ವಾವಿತ್ತು. ಈ ಹೋರಾಟ ಕೆಡಿಸಬೇಕೆಂದು ಕೆಲವರು ಸಿದ್ದಾಪುರ ಹಾಗೂ ಬನವಾಸಿ ಸೇರಿಸಿಕೊಂಡು ಸಾಗರ ಜಿಲ್ಲೆಯನ್ನಾಗಿ ಮಾಡಲು ಹೊರಟಿದ್ದಾರೆ. ಸಾಗರ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಸಭೆಯೂ ನಡೆಯುತ್ತಿದೆ. ಶಿರಸಿ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಕೂಗು ತೀವ್ರವಾಗಿ, ಪಕ್ಷಾತೀಯ ಹೋರಾಟ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತವಾಗಬೇಕು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಽವೇಶನದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿಯಾಗಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗಲು ನಮ್ಮ ಜತೆ ಕೈಜೋಡಿಸಬೇಕು ಎಂದು ವಿನಂತಿಸಿದಾಗ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಸಂಸದ ವಿಶ್ವೇಶ್ವರ ಹೆಗಡ ಕಾಗೇರಿ ಅವನ್ನು ಭೇಟಿಯಾಗಿ ವಿನಂತಿಸಿದಾಗ ಅವರೂ ಹೋರಾಟಕ್ಕೆ ಬೆಂಬಲ ನೀಡಿದ್ದರು. ಕೆಲ ದಿನಗಳಿಂದ ಸಿದ್ದಾಪುರ ಹಾಗೂ ಬನವಾಸಿ ಭಾಗವನ್ನು ಸಾಗರಕ್ಕೆ ಸೇರ್ಪಡಿಸಿ, ಜಿಲ್ಲೆ ಮಾಡಲು ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು ಎಂದು ಕರೆ ನೀಡಿದರು.ಕಾರ್ಯದರ್ಶಿ ಎಂ.ಎಂ.ಭಟ್ಟ ಕಾರೇಕೊಪ್ಪ, ಶಿರಸಿ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಹಿರಿಯ ಧುರೀಣ ರಮೇಶ ದುಭಾಶಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net