

ಬೆಳ್ತಂಗಡಿ: ಸಹಕಾರ ಭಾರತಿ ಬೆಳ್ತಂಗಡಿ ತಾಲೂಕು ಸಮಿತಿ ಸಭೆ ಸೋಮವಾರ ಬೆಳ್ತಂಗಡಿ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.
ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಸುಧಾಕರ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಭಾರತಿಯ ಮುಂದಿನ ದಿನಗಳ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ 24 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ 18 ಸಂಘಗಳಲ್ಲಿ ಸಹಕಾರ ಭಾರತಿ ಆಡಳಿತ ನಡೆಸುತ್ತಿದ್ದು, ಉತ್ತಮ ಕಾರ್ಯಯೋಜನೆಯನ್ನು ಹಮ್ಮಿಕೊಳ್ಳುವಂತೆ ತಿಳಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧ ಆಯ್ಕೆಯಾದ ಕುಶಾಲಪ್ಪ ಗೌಡ ಪೂವಾಜೆ ಮತ್ತು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಗನ್ನಾಥ ಶೆಟ್ಟಿ ಮೈರ ಅವರನ್ನು ಅಭಿನಂದಿಸಲಾಯಿತು.
ಸಹಕಾರ ಭಾರತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣ ಪ್ರಕಾಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೆಎಂಎಫ್ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.
ಸಹಕಾರ ಭಾರತಿ ಬೆಳ್ತಂಗಡಿ ಅಧ್ಯಕ್ಷ ವೆಂಕಪ್ಪಯ್ಯ ಸ್ವಾಗತಿಸಿದರು. ನಿಕಟಪೂರ್ವಾಧ್ಯಕ್ಷ ರಾಜೇಶ್ ಪೆಂರ್ಬುಡ ವಂದಿಸಿದರು.