ಜಿಲ್ಲೆಯ ಇಬ್ಬರಿಗೆ ಸಹಕಾರ ರತ್ನ ಪ್ರಶಸ್ತಿ

Amresh Patil Maski
Published on

ರಾಯಚೂರು: ಸಹಕಾರ ಕ್ಷೇತ್ರದಲ್ಲಿನ ಗಣನೀಯ ಸಾಧನೆಯನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಜಿಲ್ಲೆಯ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಪಾಟೀಲ್ ಶಾವಂತಗೇರಿ ಹಾಗೂ ಮಸ್ಕಿಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕ ಕೆ.ಅಮರೇಶ ಪಾಟೀಲ್‌ರನ್ನು ಆಯ್ಕೆ ಮಾಡಲಾಗಿದೆ.
ಪ್ರತಿವರ್ಷ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನ ಪ್ರಶಸ್ತಿಗೆ ವಿಜಯಕುಮಾರ ಪಾಟೀಲ್ ಶಾವಂತಗೇರಿ, ಕೆ.ಅಮರೇಶ ಪಾಟೀಲ್ ಆಯ್ಕೆ ಮಾಡಲಾಗಿದೆ.
ವಿಜಯಪುರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆವರಣದ್ಲಲಿ ನ.20ರಂದು ನಡೆಯಲಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net