18ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಸಹಕಾರ ಸಪ್ತಾಹ -ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾಹಿತಿ

tttttttttt
Published on






ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಬೆಂಗಳೂರು ಮತ್ತು
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ)ನ ನೇತ್ರತ್ವದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಕಾರ್ಯಕ್ರಮ ನ.18ರಂದು ಮಂಗಳೂರಿನಲ್ಲಿ ನಡೆಯಲಿದೆ.
‘ಸಾರ್ವಜನಿಕ - ಖಾಸಗಿ - ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು ‘ ಎಂಬ ವಿಷಯದ ಬಗ್ಗೆ ಮಂಗಳೂರಿನ ಉರ್ವ ಕ್ರಿಕೆಟ್ ಮೈದಾನದಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
*ಗಣ್ಯರಿಂದ ಉದ್ಘಾಟನೆ
ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಅರ್ಥಪೂರ್ಣವಾಗಿಸುವ ಉದ್ದೇಶದಿಂದ ವಸ್ತು ಪ್ರದರ್ಶನ ಮಳಿಗೆಗಳನ್ನು ಆಯೋಜಿಸಲಾಗಿದ್ದು ಇದರ ಉದ್ಘಾಟನೆಯನ್ನು ಸ್ಪೀಕರ್ ಯು. ಟಿ. ಖಾದರ್ ನೆರವೇರಿಸಲಿದ್ದಾರೆ. ಸಹಕಾರ ಸಪ್ತಾಹವನ್ನು ಸಹಕಾರ ಸಚಿವ ಕೆ. ಎನ್. ರಾಜಣ್ಣ ಉದ್ಘಾಟಿಸಲಿದ್ದಾರೆ. ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಉತ್ತಮ ಸ್ವ-ಸಹಾಯ ಸಂಘಗಳನ್ನು ದ.ಕ.ಸಂಸದ ನಳಿನ್‌ಕುಮಾರ್ ಕಟೀಲ್ ಪುರಸ್ಕರಿಸಲಿದ್ದಾರೆ.
ಸಹಕಾರ ಸಪ್ತಾಹದ ಧ್ವಜಾರೋಹಣವನ್ನು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ. ಟಿ. ದೇವೇಗೌಡ ನೆರವೇರಿಸಲಿರುವರು. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ
ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ. ಸಹಕಾರ ಜಾಥಾವನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಡಿ. ಕಾಮತ್
ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ , ಯಶ್‌ಪಾಲ್ ಎ. ಸುವರ್ಣ , ಮಂಗಳೂರು ಮಹಾನಗರ ಪಾಲಿಕೆಯ
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ. ಪಿ. ಸುಚರಿತ ಶೆಟ್ಟಿ ,ವಿಶೇಷ ಆಹ್ವಾನಿತರಾಗಿ
ಸರ್ಕಾರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಹಕಾರ ಸಂಘಗಳ ನಿಬಂಧಕ ಕ್ಯಾ.ಡಾ. ಕೆ. ರಾಜೇಂದ್ರ, ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮೈಸೂರು ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ. ಉಮೇಶ ಜಿ., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಂ. ವಾದಿರಾಜ ಶೆಟ್ಟಿ, ಜೈರಾಜ್‌ಬಿ ರೈ, ರಾಜು ಪೂಜಾರಿ, ಸದಾಶಿವ ಉಳ್ಳಾಲ್, ಸ್ಕಾೃಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net