ಸಹನಾ ಭಟ್​ಗೆ ಹವ್ಯಕ ಸಾಧಕ ರತ್ನ ಪ್ರಶಸ್ತಿ

New Sahana Bhat New
Published on

ಹುಬ್ಬಳ್ಳಿ : ಹುಬ್ಬಳ್ಳಿಯ ನೃತ್ಯ ಕಲಾವಿದೆ ಡಾ. ಸಹನಾ ಭಟ್ ಅವರಿಗೆ ‘ಹವ್ಯಕ ಸಾಧಕ ರತ್ನ’ ಪ್ರಶಸ್ತಿ ಲಭಿಸಿದೆ.

ಬೆಂಗಳೂರು ಅರಮನೆಯಲ್ಲಿ ಡಿ. 27 ರಿಂದ 29ರವರೆಗೆ ಆಯೋಜಿಸಿರುವ ಮೂರನೇ ವಿಶ್ವ ಹವ್ಯಕ ಸಮೆ್ಮೕಳನ ಆಯೋಜಿಸಲಾಗಿದೆ. 27ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಡಾ. ಸಹನಾ ಭಟ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸುಮಾರು 30 ವರ್ಷಗಳಿಂದ ಭರತನಾಟ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಸಹನಾ ಭಟ್ ಅವರ ಬಳಿ ಸಾವಿರಾರು ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ. ದೇಶ-ವಿದೇಶಗಳಲ್ಲಿ ನೃತ್ಯ ಪ್ರದರ್ಶನ ನೀಡಿದ್ದಾರೆ. ಅನೇಕ ನೃತ್ಯ ರೂಪಕಗಳನ್ನು ನಿರ್ದೇಶಿಸಿರುವ ಇವರು ಪ್ರಸ್ತುತ ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರ ಹುಬ್ಬಳ್ಳಿ ಶಾಖೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net