ಸರ್ವಾಧ್ಯಕ್ಷರಾಗಿ ಸಾಹಿತಿ ನಾಗೇಶ್ ಕಾಲೂರು ಆಯ್ಕೆ

naagesh kaaluru
Published on

ಮಡಿಕೇರಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಆಯೋಜಿಸಿರುವ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬಹುಭಾಷಾ ಸಾಹಿತಿ ನಾಗೇಶ್ ಕಾಲೂರು ಅವರನ್ನು ಆಯ್ಕೆ ಮಾಡಲಾಗಿದೆ.

ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ಕಚೇರಿ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಸಮಿತಿ ಸಭೆಯಲ್ಲಿ ನಾಗೇಶ್ ಕಾಲೂರು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಜ.31 ಹಾಗೂ ಫೆ.1ರಂದು ನಿಡ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸಮ್ಮೇಳನ ನಡೆಯಲಿದೆ.

ಸಭೆಯಲ್ಲಿ ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ವಿರಾಜಪೇಟೆ ಅಧ್ಯಕ್ಷ ಮಧೋಶ್ ಪೂವಯ್ಯ, ನಿರ್ದೇಶಕರಾದ ಕೋಡಿ ಚಂದ್ರಶೇಖರ್, ಲೋಕನಾಥ್ ಅಮೆಚೂರ್, ಎಸ್.ಪಿ.ಪ್ರಸನ್ನ ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net