

ತಿಪಟೂರು: ತಾಲೂಕಿನ ಬಯಲು ಸೀಮೆ ಸಾಮಾಜಿಕ ಹಾಗೂ ಸಾಂಸತಿಕ ಸಂ 2024ರ ಸಾಹಿತ್ಯ ಕಲ್ಪತರು ಪ್ರಶಸ್ತಿಯನ್ನು ೂಷಿಸಿದ್ದು, ಬರಹಗಾರ ಹಾಗೂ ಭಾಷಣಕಾರ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮದ ಖ್ಯಾತಿಯ ಡಾ.ನಾ.ಸೋಮೇಶ್ವರ ಅವರನ್ನು ಆಯ್ಕೆ ಮಾಡಿದೆ. ಸಂವು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಾ ಬಂದಿದೆ. ಈ ಪ್ರಶಸ್ತಿಯು 10,000 ನಗದು ರೂ. ಸನ್ಮಾನ ಮತ್ತು ಫಲಕ ಒಳಗೊಂಡಿದ್ದು, ನ.9ರಂದು ನಗರದ ಶ್ರೀ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನಡೆಯಲಿರುವ ಸಂದ 23ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಶಾಸಕ ಕೆ.ಷಡಕ್ಷರಿ, ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನಿವೃತ್ತ ಎಸಿಪಿ ಲೋಕೇಶ್ವರ, ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ, ಉಪವಿಭಾಗಾಧಿಕಾರಿ ಸಪ್ತಶ್ರೀ, ತಹಸೀಲ್ದಾರ್ ಪವನ್ ಕುಮಾರ್, ಇಒ ಸುದರ್ಶನ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಸಂದ ಪ್ರಧಾನ ಕಾರ್ಯದರ್ಶಿ ಎನ್.ಭಾನುಪ್ರಶಾಂತ್ ತಿಳಿಸಿದ್ದಾರೆ.