8 ರಂದು ಕಸಬಾ ಹೋಬಳಿ ಸಾಹಿತ್ಯ ಸಮ್ಮೇಳನ

ಫೋಟೋ ಶೀರ್ಷಿಕೆ, 31 ಸಿಆರ್_ಪಿ 2 ಎ
Published on


ಚನ್ನರಾಯಪಟ್ಟಣ : ತಾಲೂಕಿನ ಕಸಬಾ ಹೋಬಳಿ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಫೆ.8 ರಂದು ಕಲ್ಕೆರೆಯ ಪ್ರೌಢಶಾಲೆ ಆವರಣದಲ್ಲಿ ಆಯೋಜನೆಗೊಂಡಿದೆ ಎಂದು ಕಸಾಪ ತಾಲೂಕು ಘಟಕ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಹೇಳಿದರು. ಸಮ್ಮೇಳನಾಧ್ಯಕ್ಷರಾಗಿ ಸ್ಥಳೀಯ ಸಾಹಿತಿ ಎನ್. ಬೋರಲಿಂಗಯ್ಯ ನಂಬಿಹಳ್ಳಿ ಆಯ್ಕೆಯಾಗಿದ್ದಾರೆ. ಫೆ.8ರ ಬೆಳಗ್ಗೆ 8ಕ್ಕೆ ಧ್ವಜಾರೋಹಣ, 8.30ಕ್ಕೆ ಬೈಕ್ ರ‌್ಯಾಲಿ, 9ಕ್ಕೆ ಎತ್ತಿನಗಾಡಿ ಸಹಿತ 15 ಕಲಾ ತಂಡಗಳ ಮೆರವಣಿಗೆ ನಡೆಯಲಿದೆ. 10 ಗಂಟೆಗೆ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಕಸಾಪ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧ್ಯಕ್ಷ ಮಲ್ಲೇಶ್‌ಗೌಡ, ಶಾಸಕ ಬಾಲಕೃಷ್ಣ, ಮಾಜಿ ಎಂಎಲ್ಸಿ ಗೋಪಾಲಸ್ವಾಮಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹೋಬಳಿ ಕಸಾಪ ಘಟಕದ ಅಧ್ಯಕ್ಷ ದಯಾನಂದ ಶೆಟ್ಟಿಹಳ್ಳಿ ಮಾತನಾಡಿ,ನಮ್ಮ ವ್ಯಾಪ್ತಿಯ ಹಳ್ಳಿಗಳ ಕೋಲಾಟ, ಸೋಬಾನೆ ಪದ, ರಂಗ ಕುಣಿತಕ್ಕೆ ವೇದಿಕೆ ಕಲ್ಪಿಸಲಾಗಿದೆ ಎಂದರು. ವಿಚಾರಗೋಷ್ಠಿ, ಸಂಜೆ ಜಾನಪದ ಝೇಂಕಾರ ಕಾರ್ಯಕ್ರಮವಿದೆ. ಖ್ಯಾತ ಗಾಯಕ ಅಪ್ಪಗೆರೆ ತಿಮ್ಮರಾಜು ಮತ್ತು ವಾಗ್ಮಿ ಪ್ರೊ. ಕೃಷ್ಣೇಗೌಡ ಭಾಗವಹಿಸಲಿದ್ದಾರೆಂದರು. ಸುದ್ದಿಗೋಷ್ಠಿಯಲ್ಲಿ ಕಸಾಪ ಘಟಕದ ಪದಾಧಿಕಾರಿಗಳಾದ ಬಿ.ಸಿ.ದೊರೆಸ್ವಾಮಿ, ನಾಗೇಂದ್ರ, ಮಲ್ಲೇಶ್‌ಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net