

ಉಡುಪಿ: ಮಣಿಪಾಲದ ಶ್ರೀ ಕ್ಷೇತ್ರ ಶಿವಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮತಿ ಮಂಟಪದಲ್ಲಿ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಡಿ.30 ರಂದು ನಡೆಯಲಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ ಮಣಿಪಾಲದ ಎಂ.ಐ.ಟಿ. ಬಸ್ ನಿಲ್ದಾಣದಿಂದ ಮೆರವಣಿಗೆಯೊಂದಿಗೆ ಸಮ್ಮೇಳನಾಧ್ಯಕ್ಷ ಎಚ್.ಶಾಂತರಾಜ್ ಐತಾಳ್ ಅವರನ್ನು ಸ್ವಾಗತಿಸಲಾಗುವುದು. 9:25ಕ್ಕೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದು, 9:30ಕ್ಕೆ ಹರ್ಷಿತಾ ಉಡುಪ ಹಾಗೂ ಪ್ರಣಮ್ಯ ತಂತ್ರಿ ಅವರಿಂದ ಯಕ್ಷ ನಾಟ್ಯ ವೈಭವ ನಡೆಯಲಿದೆ. 9.50ಕ್ಕೆ ಪುಸ್ತಕ ಮಳಿಗೆಯನ್ನು ಸಾಹಿತಿ ನೆಂಪು ನರಸಿಂಹ ಭಟ್ ಉದ್ಘಾಟಿಸಲಿದ್ದಾರೆ. 10 ಕ್ಕೆ ಅಂತಾರಾಷ್ಟ್ರೀಯ ಕಲಾವಿದ, ಪರಿಸರವಾದಿ ದಿನೇಶ್ ಹೊಳ್ಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಹಿರಿಯ ಸಾಧಕ, ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು, ಕಲಾವಿದ ಮನೋಹರ್ ನಾಯಕ್, ಅಂತಾರಾಷ್ಟ್ರೀಯ ಕ್ರೀಡಾಪಟು ಅರುಣಾಕಲಾ ರಾವ್, ಸಮಾಜ ಸೇವಕ ರವೀಂದ್ರ ಶೆಟ್ಟಿ ಕಡೆಕಾರ್ ಅವರನ್ನು ಅಭಿನಂದಿಸಲಾಗುವುದು ಎಂದರು.
ನಂತರ ವಿವಿಧ ಸಾಂಸ್ಕತಿಕ ಕಾರ್ಯಕ್ರಮಗಳೊಂದಿಗೆ ಅಂಚೆ ಕಾರ್ಡ್ ಕಥೆಗಳು(ಗೃಹಿಣಿಯರಿಗಾಗಿ), ಯುವ ಕವಿಗೋಷ್ಠಿ, ಅಲ್ಲಿ ಇಲ್ಲಿ ಹಾಸ್ಯಗೋಷ್ಠಿ, ಅಧ್ಯಕ್ಷರೊಂದಿಗೆ ಮುಖಾಮುಖಿ, ವಿವಿಧ ಗೋಷ್ಠಿಗಳು ನಡೆಯಲಿವೆ ಎಂದರು.
ಸಮಾರೋಪ
ಸಾಯಂಕಾಲ 4.30ಕ್ಕೆ ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಸಾಹಿತಿ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡಕ ಸಮಾರೋಪ ಭಾಷಣ ಮಾಡಲಿದ್ದಾರೆ. ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಗುರು ವಸಂತಿ ಸಾಂಸತಿಕ ವೇದಿಕೆ ಮಣಿಪಾಲ ಕಲಾವಿದರಿಂದ 'ಕಾದಿರುವಳು ಶಬರಿ ' ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಸಾಧಕರಿಗೆ ಸನ್ಮಾನ
ಡಾ. ಎನ್.ಎ.ಮಧ್ಯಸ್ಥ (ಪಕ್ಷಿ ಪ್ರಪಂಚ) , ಪ್ರೊ.ಬಾಲಕೃಷ್ಣ ಮದ್ದೋಡಿ ಮಣಿಪಾಲ(ಶಿಕ್ಷಣ), ಡಾ.ವೈ.ಸುದರ್ಶನ ರಾವ್ (ವೈದ್ಯಕಿಯ), ಡಾ. ರಶ್ಮಿ ಅಮ್ಮೆಂಬಳ(ಮಾಧ್ಯಮ), ಕೃಷ್ಣ ಸೆಟ್ಟಿಬೆಟ್ಟು(ಯೋಧ), ಲಿಯಾಖತ್ ಆಲಿ(ಚಿತ್ರಕಲೆ), ನಿದೀಶ್ ಕುಮಾರ್ ಪರ್ಕಳ(ಛಾಯಾಗ್ರಹಣ), ವಿನಯ ಸರೋಜಾ ಕುಮಾರಿ(ಶಿಕ್ಷಣ), ರಂಜಿತ್ ಶೆಟ್ಟಿ(ಸಾಂಸತಿಕ ), ಸಂಜೀವ ಪಾಟೀಲ್ ಪರ್ಕಳ(ಸಾಹಿತ್ಯ) , ನಿತ್ಯಾನಂದ ಕಬಿಯಾಡಿ(ಭಜನೆ), ವಿದುಷಿ ಉಷಾ ಹೆಬ್ಬಾರ್(ಸಂಗೀತ), ಸುಗುಣ ಶಂಕರ್ ಸುವರ್ಣ ಮಣಿಪಾಲ (ಉದ್ಯಮ ), ಗೋಪಿ ಹಿರೇಬೆಟ್ಟು(ವ್ಯಂಗ್ಯ ಚಿತ್ರ), ಕೃತಿ ಆರ್. ಸನಿಲ್(ನೃತ್ಯ), ಸುಶೀಲ ಆರ್. ರಾವ್ ಬೈಲೂರು(ಸಾಹಿತ್ಯ ) ಮಹಮ್ಮದ್ ಮೌಲ(ಸಮಾಜ ಸೇವೆ ), ರತ್ನಾಕರ ಕಲ್ಯಾಣಿ ಪೆರ್ಡೂರು(ರಂಗಭೂಮಿ). ವಿದ್ಯಾ ವಿಶ್ವೇಶ(ರಂಗೋಲಿ ), ಸುಜಾತಾ ಜೆ. ಶೆಟ್ಟಿ(ಔಷಧ) ಹಾಗೂ ಪರ್ಕಳದ ಅಜ್ಜ ಅಜ್ಜಿ ಹೋಟೆಲ್ ದಂಪತಿ ವಸಂತಿ ಪ್ರಭು, ಗೋಪಾಲಕೃಷ್ಣ್ಣ ಪ್ರಭು, ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ, ಸರಿಗಮ ಭಾರತಿ ಪರ್ಕಳ, ಗೋಳಿಕಟ್ಟೆ ಫ್ರೆಂಡ್ಸ್ ಪರ್ಕಳ, ರತ್ನ ಸಂಜೀವ ಕಲಾಮಂಡಳಿ ಸರಳೆಬೆಟ್ಟು , ವಿಘ್ನೇಶ್ವರ ಕಲಾಭವನ ಪರ್ಕಳ, ವಿಪಂಚಿ ಕಲಾಬಳಗ ಮಣಿಪಾಲ ಅವರನ್ನು ಸನ್ಮಾನಿಸಲಾಗುವುದು ಎಂದರು.
ಗೋಷ್ಠಿಯಲ್ಲಿ ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು, ಭುವನ ಪ್ರಸಾದ್ ಹೆಗ್ಡೆ, ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ ಉಪಸ್ಥಿತರಿದ್ದರು.