ಸಂತ ಜೋಸೆಫ್ ಪಿಯು ಕಾಲೇಜು ತಂಡ ದ್ವಿತೀಯ

HUN-DEC-23-1(ST JOSEPH STATE LEVEL TEAM)
ಬಾಗಲಕೋಟೆಯಲ್ಲಿ ಆಯೋಜನೆಗೊಂಡಿದ್ದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೈಸೂರು ಜಿಲ್ಲೆಯನ್ನು ಪ್ರತಿನಿಧಿಸಿದ ಹುಣಸೂರು ಸಂತ ಜೋಸೆಫರ ಪಿಯು ಕಾಲೇಜಿನ ತಂಡ ದ್ವಿತೀಯ ಸ್ಥಾನ ಗಳಿಸಿತು. ಪ್ರಾಂಶುಪಾಲೆ ಸಿಸ್ಟರ್ ಅನಿತಾ ಡಿಸೋಜ, ಪ್ರಸಾದ್ ಇತರರಿದ್ದಾರೆ.
Published on

ಹುಣಸೂರು: ಬಾಗಲಕೋಟೆ ಜಿಲ್ಲೆಯ ಯಲ್ಲಟ್ಟಿಯಲ್ಲಿ ಇತ್ತೀಚೆಗೆ ಆಯೋಜನೆಗೊಂಡಿದ್ದ ರಾಜ್ಯಮಟ್ಟದ ಪಿಯು ವಿಭಾಗದ ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ಮೈಸೂರು ಜಿಲ್ಲೆಯನ್ನು ಪ್ರತಿನಿಧಿಸಿದ್ದ ಹುಣಸೂರು ನಗರದ ಸಂತ ಜೋಸೆಫರ ಪಿಯು ಕಾಲೇಜಿನ ತಂಡ ದ್ವಿತೀಯ ಸ್ಥಾನ ಗಳಿಸುವ ಮೂಲಕ ಸಾಧನೆಗೈದಿದೆ.

ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ತಂಡದ ವಿರುದ್ಧ 23-25, 10-25 ಮತ್ತು ನಿರ್ಣಾಯಕ ಸೆಟ್‌ನಲ್ಲಿ 15-14 ಅಂತರಗಳಿಂದ ತಂಡ ವೀರೋಚಿತ ಸೋಲು ಕಂಡಿತು. ಪಂದ್ಯದಲ್ಲಿ ಸೋಲು ಅನುಭವಿಸಿದರೂ ತಂಡದ ಆಟ ನೆರೆದಿದ್ದ ಎಲ್ಲ ಕ್ರೀಡಾಸಕ್ತರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು ಎಂದು ಪ್ರಾಂಶುಪಾಲೆ ಸಿಸ್ಟರ್ ಅನಿತಾ ಡಿಸೋಜ ಸಂತಸ ವ್ಯಕ್ತಪಡಿಸಿ ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಸಾದ್ ಮತ್ತು ಕ್ರಿಡಾಪಟುಗಳನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net