ಅಕ್ರಮ ಮರಳುಗಾರಿಕೆ ವಿರುದ್ಧ ಕಠಿಣ ಕ್ರಮ

11 skpp 1
Published on

ಸಕಲೇಶಪುರ: ಅಕ್ರಮವಾಗಿ ಮರಳುಗಾರಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ತಾಲೂಕಿನಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ದೂರುಗಳು ಬರುತ್ತಿದ್ದು, ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಳಲಿ ಘನತ್ಯಾಜ್ಯ ಘಟಕದ ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿದೆ. ಕಾಮಗಾರಿ ಮುಗಿಯುವವರೆಗೆ ಪುರಸಭೆ ತ್ಯಾಜ್ಯವನ್ನು ಹಾಸನದ ಅಗಿಲೆ ಘನತ್ಯಾಜ್ಯ ಘಟಕಕ್ಕೆ ಸಾಗಿಸಲು ಸೂಚಿಸಲಾಗಿದೆ ಎಂದರು.

ಬೆಳಗೋಡು ನಾಡ ಕಚೇರಿಗೆ ಧಿಡೀರ್ ಭೇಟಿ ನೀಡಿದ ಅವರು, ವಿಧಾವ ವೇತನ ಸೇರಿ ವಿವಿಧ ಮಾಸಾಶನಗಳ ಕಡತಗಳನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಗ್ರಾಮಸ್ಥರು ನಾಡ ಕಚೇರಿಗೆ ಮೂಲಸೌಕರ್ಯಗಳನ್ನು ಒದಗಿಸುವಂತೆ ಮನವಿ ಮಾಡಿದರು. ಎಚ್‌ಆರ್‌ಪಿ ಹಗರಣದಲ್ಲಿ ಭಾಗಿಯಾಗಿರುವ ಹಾನುಬಾಳ್ ಹೋಬಳಿ ಕಂದಾಯ ನಿರೀಕ್ಷಕರ ಬಡ್ತಿ ಹಾಗೂ ವರ್ಗಾವಣೆಯನ್ನು ತಡೆ ಹಿಡಿಯಬೇಕು ಎಂದು ಬಜರಂಗದಳದ ಕಾರ್ಯಕರ್ತರು ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net