ವೇತನ ಹೆಚ್ಚಳಕ್ಕೆ ವೈದ್ಯರ ಆಗ್ರಹ

0102
Published on

ಬೆಳಗಾವಿ: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಕರೊನಾ ಸಂಕಷ್ಟ ಕಾಲದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದರೂ, ಸರ್ಕಾರ ವೈದ್ಯರನ್ನು ಕಡೆಗಣಿಸುತ್ತಿದೆ. ಆರೋಗ್ಯ ಇಲಾಖೆ ಕುರಿತು ಕಾಳಜಿ ತೋರುತ್ತಿಲ್ಲ ಎಂದು ದೂರಿದರು.

ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿ ಸದ್ಯ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆ ಹೊರತುಪಡಿಸಿ, ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸುತ್ತೇವೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ‘ಬೆಂಗಳೂರು ಚಲೋ’ ಚಳವಳಿ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ.ಸಂಜಯ ಡುಮ್ಮಗೋಳ ತಿಳಿಸಿದರು. ಡಾ.ವಿ.ಎಸ್. ಶಿಂಧೆ, ಡಾ.ಎಂ.ಎಸ್. ಪಲ್ಲೇದ, ಡಾ.ಸಂತೋಷ ಕೊಣ್ಣೂರಿ, ಡಾ.ಅನಿಲ ಕೊರಬು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net