ಆರನೇ ದಿನ ಪೂರೈಸಿದ ಧರಣಿ

16 CHN 2
Published on

ಚನ್ನಗಿರಿ: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಘಟಕ ತಾಲೂಕು ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರ ಆರನೇ ದಿನ ಪೂರೈಸಿತು.

ನೇತೃತ್ವ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷೆ ರೇಷ್ಮಾ ಮಾತನಾಡಿ, ಗ್ರಾಮಾಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಸುವಂತೆ ವಾರದಿಂದ ಕಚೇರಿಗೆ ಹೋಗದೆ ಧರಣಿ ನಡೆಸುತ್ತಿದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದರು.

2024ರಲ್ಲಿ ಮುಷ್ಕರ ಪ್ರಾರಂಭಿಸಿದ್ದಾಗ ಅಂದಿನ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದೆವು. ಆರು ತಿಂಗಳು ಕಳೆದರೂ ಸ್ಪಂದಿಸದ ಕಾರಣ ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ಧರಣಿಯಲ್ಲಿ ಸಂಘದ ಉಪಾಧ್ಯಕ್ಷ ಕುಮಾರನಾಯ್ಕ, ಗೌರವಾಧ್ಯಕ್ಷ ರಾಜುನಾಯ್ಕ, ಟಿ.ಎಸ್. ಚಂದ್ರಪ್ಪ, ತಿಮ್ಮೇಶ್, ಶ್ರೀನಿವಾಸ್, ಶಾಂತಕುಮಾರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net