ಧಾರವಾಡ: ನಗರದ ತೋಟಗಾರಿಕೆ ಇಲಾಖೆ ಆವರಣದ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ವಿವಿಧ ಬಗೆಯ ಅಲಂಕಾರಿಕ ಗಿಡಗಳು, ಹೂವಿನ ಸಸಿಗಳು, ಹಣ್ಣಿನ ಗಿಡಗಳು ಹಾಗೂ ಅಲಂಕಾರಿಕ ಕುಂಡಗಳು ಮಾರಾಟಕ್ಕಿವೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.