ತರಕಾರಿ ಮಾರಾಟಕ್ಕೆ ಅವಕಾಶ ಕೋರಿ ರೈತ ಸಂಘದಿಂದ ಮನವಿ

HYR MANAVI 05
Published on

ಹಿರಿಯೂರು: ನಗರದ ಸಂತೆ ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ರೈತರಿಗೆ ಅವಕಾಶ ಕಲ್ಪಿಸುವಂತೆ ರೈತ ಸಂಘದ ಪದಾಧಿಕಾರಿಗಳು ನಗರಸಭೆ ಅಧ್ಯಕ್ಷೆ, ಪೌರಾಯುಕ್ತರಿಗೆ ಗುರುವಾರ ಮನವಿ ಸಲ್ಲಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಬಬ್ಬೂರು ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿತ್ತು. ಅದು ಎರಡು ವರ್ಷದಿಂದಲೂ ಮುಂದುವರಿದೆ. ಆದರೆ, ಈಗ ಜನಜೀವನ ಸಹಜ ಸ್ಥಿತಿಗೆ ಬರಳಿದೆ. ಆದ್ದರಿಂದ ಮೊದಲಿನಂತೆ ಸಂತೆ ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಎಪಿಎಂಸಿ ನಗರ ಪ್ರದೇಶದ ನಿವಾಸಿಗಳಿಗೆ ದೂರ ಆಗಿರುವುದರಿಂದ ತರಕಾರಿ, ಸೊಪ್ಪು ಇತರೆ ವಸ್ತು ಖರೀದಿಗೆ ಬರುತ್ತಿಲ್ಲ. ಇದರಿಂದ ಗ್ರಾಮೀಣ ಪ್ರದೇಶದಿಂದ ವ್ಯಾಪಾರಸ್ಥ ರೈತರಿಗೆ ಬಹಳ ನಷ್ಟ ಉಂಟಾಗುತ್ತಿದೆ. ಆದ್ದರಿಂದ ತಕ್ಷಣ ನಗರದ ಹೃಯದ ಭಾಗದಲ್ಲಿರುವ ಸಂತೆ ಮೈದಾನದಲ್ಲಿ ಮಾರಾಟಕ್ಕೆ ಮರು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ನಗರಸಭೆ ಅಧ್ಯಕ್ಷೆ ಶಂಷುನ್ನೀಸಾ, ಪೌರಾಯುಕ್ತ ಉಮೇಶ್, ಶೀಘ್ರದಲ್ಲಿ ಚರ್ಚೆ ನಡೆಸಿ ರೈತರಿಗೆ ಅನುಕೂಲ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net