

ಸಾಲಿಗ್ರಾಮ: ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ದೇವಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸೀತಾಕಲ್ಯಾಣ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.
ಕಲ್ಯಾಣೋತ್ಸವಕ್ಕೆ ಮುಂಚಿತವಾಗಿ ಸೀತೆ ಹಾಗೂ ಶ್ರೀರಾಮನ ಉತ್ಸವ ಮೂರ್ತಿಗಳನ್ನು ದೇವಾಲಯದ ಸುತ್ತ ಮಂಗಳ ವಾದ್ಯಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಪ್ರಾಂಗಣದಲ್ಲಿನ ಮಂಗಳ ಮಂಟಪದಲ್ಲಿ ಕಲ್ಯಾಣೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು. ದೇವಾಲಯವನ್ನು ವಿವಿಧ ಬಗೆಯ ಹೂವು, ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ವಿವಿಧ ಭಾಗಗಳಿಂದ ಭಕ್ತರು ಆಗಮಿಸಿದ್ದರು.
ಶಾಸಕ ಡಿ.ರವಿಶಂಕರ್, ಸುನೀತಾ ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ವನಜಾಕ್ಷಮ್ಮ, ಕುಪ್ಪೆ ಗ್ರಾಪಂ ಅಧ್ಯಕ್ಷೆ ಗೀತಾ ದಿನೇಶ್, ಉಪಾಧ್ಯಕ್ಷೆ ಗೀತಾ ಕಾಂತರಾಜು, ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಶರತ್‌ಕುಮಾರ್ ಇದ್ದರು.