ಪ್ರತಿಭಾ ಪುರಸ್ಕಾರ ಸಮಾರಂಭ 15ರಂದು

markandeya doddamani
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಧಾರವಾಡದ ಬಾಲಕರ ಸರ್ಕಾರಿ ಟ್ರೇನಿಂಗ್ ಕಾಲೇಜ್ ಸಭಾಭವನದಲ್ಲಿ ಸೆ. 15ರಂದು ಮಧ್ಯಾಹ್ನ 3 ಗಂಟೆಗೆ ಶರಣ ಹರಳಯ್ಯ ಪತ್ರಿಕೆಯ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಶಿಕ್ಷಣ ಸಮಿತಿ ಹಾಗೂ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಾರ್ಕಂಡೇಯ ದೊಡಮನಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ, ಪಿಎಚ್​ಡಿ ಹಾಗೂ ವೈದ್ಯಕೀಯ ವ್ಯಾಸಂಗ ಪೂರ್ಣಗೊಳಿಸಿದ ಸಮಗಾರ ಹರಳಯ್ಯ ಸಮಾಜದ 28 ಜನರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ಐಎಎಸ್ ಅಧಿಕಾರಿ ಆರ್. ಸ್ನೇಹಲ್, ಎಸ್​ಬಿಐ ಸಿಬ್ಬಂದಿ ರೇಖಾ ಮನಗೂಳಿ, ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಾದ ಪರಮೇಶ್ವರ ಗಾಮನಗಟ್ಟಿ, ಜೆ.ಕೆ. ಕಾಂಬಳೆ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ವಾಸುದೇವ ದೊಡಮನಿ, ಕೆವಿಜಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ಮಾರುತಿ ಕಲಾದಗಿ ಹಾಗೂ ಬಾಗಲಕೋಟೆ ಹರಿಜನ ಗಿರಿಜನ ಸಂಸ್ಥೆ ಅಧ್ಯಕ್ಷ ಮಲ್ಲಿಕಾರ್ಜುನ ಹೊಸಮನಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಅಥಣಿಯ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕವಿವಿ ನಿವೃತ್ತ ಪ್ರಾಧ್ಯಾಪಕ ಬಿ.ಪಿ. ವಾಘ್ಮೂೕರೆ ಅಧ್ಯಕ್ಷತೆ ವಹಿಸುವರು. ಡಾ. ಆರ್.ಬಿ. ಚಿಲಮಿ ಉಪನ್ಯಾಸ ನೀಡುವರು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜೆ.ಕೆ. ಕಾಂಬಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net