ಶಕ್ತಿ ದೇವತೆಗಳ ಸಮಾಗಮ ಸಂಪನ್ನ

dharmika
ಶಿವಮೊಗ್ಗ ಕೋಟೆ ರಸ್ತೆಯ ಶ್ರೀ ಕೋಟೆ ಆಂಜನೇಯ ದೇವಸ್ಥಾನದಲ್ಲಿ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದರ್ಶನ ಪಡೆದರು.
Published on

ಶಿವಮೊಗ್ಗ: ನಗರದ ಕೋಟೆ ರಸ್ತೆಯ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಗುರುವಾರ 25ನೇ ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

ವಿಶ್ವ ಹಿಂದು ಪರಿಷತ್, ಬಜರಂಗದಳ ಹಾಗೂ ಶಕ್ತಿ ದೇವತೆಗಳ ಸಮಾಗಮ ಸಮಿತಿ ವತಿಯಿಂದ ಎಳ್ಳಮಾವಾಸ್ಯೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರದ 50ಕ್ಕೂ ಅಧಿಕ ದೇವತೆಗಳು ಆಂಜನೇಯ ದೇವಾಲಯದ ಆವರಣದಲ್ಲಿ ಸಮಾಗಮಗೊಂಡವು.
ಬೆಳಗ್ಗೆಯಿಂದ ಎಲ್ಲ ದೇವತೆಗಳಿಗೂ ಪೂಜೆ ಮತ್ತು ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನೇರವೇರಿಸಲಾಯಿತು. ಹೆಚ್ಚಿನ ದೇವತೆಗಳು ಪಲ್ಲಕ್ಕಿಯಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಸಾರ್ವಜನಿಕರು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net