ಎಲ್ಲರೂ ನಮ್ಮವರು ಎಂಬ ಭಾವನೆ ಮುಖ್ಯ - ಈಶ್ವರ ಭಟ್ ಪಂಜಿಗುಡ್ಡೆ ಹೇಳಿಕೆ

smt vramhalkshmi 1
Published on

ಪುತ್ತೂರು: ಸಂಘಟನೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಬೆನ್ನೆಲುಬಾಗಿ ನಿಂತು ಕೆಲಸ ಮಾಡುತ್ತೇವೆ. ಸಂಘಟನೆಗಳು ಬೇರೆಯಾದರೂ ಎಲ್ಲರೂ ನಮ್ಮವರು ಎಂಬ ಭಾವನೆ ಮೂಡಿದಾಗ ಮಾತ್ರ ದೇವಸ್ಥಾನ ಅಭಿವೃದ್ಧಿಯಾಗಲು ಸಾಧ್ಯ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹೇಳಿದರು.

ನಟರಾಜ ವೇದಿಕೆಯಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ, ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಶ್ರಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಗೌರವಾಧ್ಯಕ್ಷೆ ಶಕುಂತಳಾ ಟಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹರಿಪ್ರಸಾದ್ ವೈಲಾಯ ಪೌರೋಹಿತ್ವ ಪೂಜೆ ನೆರವೇರಿತು. ಮಂಗಳೂರು ಶ್ರೀನಿವಾಸ ಕಾಲೇಜು ಉಪನ್ಯಾಸಕಿ ಡಾ.ವೀಣಾ ಸಂತೋಷ್ ರೈ ಧಾರ್ಮಿಕ ಉಪನ್ಯಾಸ ನೀಡಿದರು. ಉದ್ಯಮಿ ರಕ್ಷಾ ಉಜ್ವಲ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಸುಭಾಷ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಅಧ್ಯಕ್ಷೆ ನಯನಾ ರೈ, ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಅಧ್ಯಕ್ಷೆ ಗಂಗಾರತ್ನ ವಿ. ರೈ ಉಪಸ್ಥಿತರಿದ್ದರು.

ಸೀತಾ ಭಟ್ ಪ್ರಾರ್ಥಿಸಿದರು. ಸ್ವರ್ಣಲತಾ ಹೆಗ್ಡೆ ಸ್ವಾಗತಿಸಿದರು. ಶಾರದಾ ಅರಸ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net