

ಚಾಮರಾಜನಗರ: ಸಮತ ಸೊಸೈಟಿ ಸಂಸ್ಥೆಯ 15ನೇ ವರ್ಷದ ಅಂಗವಾಗಿ ಸೆ.23ರಂದು ನಗರದಲ್ಲಿ ಸಮತ ಸಂಭ್ರಮ, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ವಾರ್ಷಿಕ ಮಹಾಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ತಲ್ಕಿ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷೆ ಎಚ್.ಜಿ.ದೀಪಾ ಬುದ್ಧೆ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ರಂಗಮಂದಿರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಶುರುವಾಗಲಿರುವ ಕಾರ್ಯಕ್ರಮವನ್ನು ಜಿಲ್ಲಾ ನ್ಯಾಯಾಧೀಶೆ ಬಿ.ಎಸ್.ಭಾರತಿ ಉದ್ಘಾಟಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಉಪಸ್ಥಿತರಿರಲಿದ್ದಾರೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆ ವಹಿಸುವರು ಎಂದು ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಿದಂಬರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಮತ್ತು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಎಂ.ಎಸ್.ರವಿಕುಮಾರ್, ಮೈಸೂರು ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಪ್ರೊೇಸರ್ ಜೆ.ಸೋಮಶೇಖರ, ರಾಜ್ಯ ಏಡ್ಸ್ ಪ್ರಿವಿನ್ಸ್ ಸೊಸೈಟಿ ಜಂಟಿ ನಿರ್ದೇಶಕ ಪಮೇಶ ಕಟ್ಟಿಮನೆ ಭಾಗವಹಿಸುವರು.
ಜಿಲ್ಲೆಯ ಎಲ್ಲ ತಾಲೂಕುಗಳ ತಹಸೀಲ್ದಾರ್‌ಗಳು, ತಾಲೂಕುಗಳ ಎನ್‌ಆರ್‌ಎಲ್‌ಎಂ ಸದಸ್ಯರು, ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ಸ್ ೌಂಡೇಶನ್, ಪಯಣ, ಸಾರಥ್ಯ, ಜೀವಾ , ಸಂಗಮ ಸಂಘಟನೆಗಳು, ರಾಜ್ಯ ಲಿಂಗತ್ವ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆ, ಐಸಿಟಿಸಿ ಸದಸ್ಯರು, ಎಆರ್‌ಟಿ ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು.
ಸಮಾರಂಭಕ್ಕೂ ಮುನ್ನ ಬೆಳಗ್ಗೆ 8.30ಕ್ಕೆ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಡಾ.ರಾಜ್‌ಕುಮಾರ್ ರಂಗಮಂದಿರದವರೆಗೆ ಡೊಳ್ಳು ಕುಣಿತದೊಂದಿಗೆ ಸಮತಾ ಸಂಭ್ರಮದ ನಡೆಗೆ ಹಮ್ಮಿಕೊಳ್ಳಲಾಗಿದೆ. 10.30ರಿಂದ 1.30ವರೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.15ಕ್ಕೆ ವಾರ್ಷಿಕ ಮಹಾಸಭೆ ಜರುಗಲಿದೆ. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಪ್ರತಿನಿಧಿಗಳ ಆಯ್ಕೆಗೆ ಚುನಾವಣೆ ನಡೆಯಲಿದೆ. 3.30ರಿಂದ 4.430ವರೆಗೆ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದ್ದು, ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಜೀವನಾಧಾರಿತ ನಾಟಕ ‘ತಲ್ಕಿ’ ಪ್ರದರ್ಶನಗೊಳ್ಳಲಿದೆ. ಈ ನಾಟಕದಲ್ಲಿ ಪಯಣ ಸಂಸ್ಥೆಯ 55 ವರ್ಷ ಮೇಲ್ಪಟ್ಟ ಲಿಂಗತ್ವ ಅಲ್ಪಸಂಖ್ಯಾತರೇ ನಟಿಸಿದ್ದಾರೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ ನಾಟಕ ಪ್ರದರ್ಶನಗೊಳ್ಳುತ್ತಿದೆ ಎಂದರು.
ಸಮತಾ ಸೊಸೈಟಿಯ ಯೋಜನಾ ವ್ಯವಸ್ಥಾಪಕ ದೊಡ್ಡಸ್ವಾಮಿ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರಿಗೆ 132 ಟಿಜಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ. ಕೆಲವರಿಗೆ ಗೃಹಲಕ್ಷ್ಮೀ ಯೋಜನೆಯಡಿ ಹಣವೂ ಬರುತ್ತಿದೆ. ಬ್ಯಾಂಕ್‌ಗಳಲ್ಲಿ ಸಾಲ ಸೌಲಭ್ಯ ಸಿಕ್ಕಿದೆ ಎಂದರು. ಗೋಷ್ಠಿಯಲ್ಲಿ ಸಮತಾ ಸೊಸೈಟಿಯ ಖಜಾಂಚಿ ಆರ್.ಪಿ.ಸಂತೋಷ್‌ಕುಮಾರ್, ಸಮಾಲೋಚಕರಾದ ರ್ಇಾನ್‌ಪಾಷ, ವೆಂಕಟೇಶ್, ಸದಸ್ಯೆ ಪ್ರೇಮ ಇದ್ದರು.