

ಕುಶಾಲನಗರ:
ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಮತ್ತು ತಾಲೂಕು ಆರೋಗ್ಯ ಅಧಿಕಾರಿ ನಿರ್ದೇಶನದ ಹಿನ್ನೆಲೆಯಲ್ಲಿ ಕುಶಾಲನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ತಂಡ ಪಟ್ಟಣದ ಡಾ. ಅಂಬೇಡ್ಕರ್ ಬಡಾವಣೆಗೆ ಭೇಟಿ ನೀಡಿ ಟೌನ್ ಲಾರ್ವಾ ಸಮೀಕ್ಷೆಯ ಅಡ್ಡಪರಿಶೀಲನೆ ನಡೆಸಿತು.
ಆರ್‌ಆರ್‌ಟಿ ತಂಡದ ವತಿಯಿಂದ ಈಡಿಸ್ ಲಾರ್ವಾ ಸಮೀಕ್ಷೆ, ಜ್ವರ ಸಮೀಕ್ಷೆ ಮಾಡಲಾಯಿತು. ಇದೇ ಸಂದರ್ಭ ಸಾರ್ವಜನಿಕರಿಗೆ ಡೆಂಗ್ಯೂ, ಮಲೇರಿಯಾ ಜ್ವರ ಹಾಗೂ ಚಿಕೂನ್ ಗುನ್ಯಾ ಜ್ವರದ ಬಗ್ಗೆ ಕರಪತ್ರಗಳನ್ನು ಹಂಚುವುದರ ಮೂಲಕ ಅದರ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಇದೇ ಸಂದರ್ಭ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಹಿರಿಯ ಆರೋಗ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.