

ಹನೂರು: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ಧಾರವಾಡದಲ್ಲಿ ನಡೆದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹನೂರಿನ ಶ್ರೀ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಪ್ರಥಮ ಸ್ಥಾನಗಳಿಸಿ 25 ಸಾವಿರ ನಗದು ಬಹುಮಾನವನ್ನು ಪಡೆದಿದ್ದಾರೆ.
ಮಕ್ಕಳ ದಿನಾಚರಣೆಯ ಅಂಗವಾಗಿ ಕಳೆದ ನವೆಂಬರ್ ತಿಂಗಳಲ್ಲಿ ಚಾಮರಾಜನಗರದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಶಾಲೆಯ ಸಮೀಕ್ಷಾ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದರು. ಗುರುವಾರ ಧಾರವಾಡದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಗಳಿಸಿ 25 ಸಾವಿರ ರೂ ನಗದು ಬಹುಮಾನ ಪಡೆದಿದ್ದಾರೆ.
ಸಾಧನೆಗೈದ ಸಮೀಕ್ಷಾಳನ್ನು ಬಿಇಒ ಗುರುಲಿಂಗಯ್ಯ, ಪ್ರಾಶುಂಪಾಲ ಮಧುಸೂದನ್ ಹಾಗೂ ಶಿಕ್ಷಕರು ಅಭಿನಂದಿಸಿದ್ದಾರೆ.