ನಿವಾಸಿಗಳಿಗೆ ಹಕ್ಕುಪತ್ರ ನೀಡಲು ಆಗ್ರಹ: ಮಂಡ್ಯದಲ್ಲಿ ಸಂಪಳ್ಳಿ ಗ್ರಾಮಸ್ಥರ ಪ್ರತಿಭಟನೆ

Sampally villagers protest mandya
Published on

ಮಂಡ್ಯ: ತಾಲೂಕಿನ ಸಂಪಳ್ಳಿ ಗ್ರಾಮದ ಸರ್ವೇ ನಂ.129 ರಲ್ಲಿ ವಾಸ ಮಾಡುತ್ತಿರುವವರಿಗೆ ಹಕ್ಕು ಪತ್ರ ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಹಾಗೂ ನಿವಾಸಿಗಳು ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಪಳ್ಳಿ ವಾಸಿಗಳು 94/ಸಿ ಅಡಿ ತಾಲೂಕು ಆಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಹಕ್ಕುಪತ್ರ ವಿತರಿಸುವಂತೆ ಸೂಚಿಸಿದ್ದರೂ ಸಹ ತಹಸೀಲ್ದಾರ್ ಇಲ್ಲಸಲ್ಲದ ಸಬೂಬು ಹೇಳುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರ್ಹ ಎಲ್ಲ ಕುಟುಂಬಗಳಿಗೆ ಹಕ್ಕು ಪತ್ರ ನೀಡಬೇಕು. ಕುಡಿಯುವ ನೀರು, ವಿದ್ಯುತ್, ಶೌಚಗೃಹ, ರಸ್ತೆ, ಚರಂಡಿ, ಸ್ಮಶಾನ ಸೇರಿದಂತೆ ಇತರೆ ಮೂಲ ಸೌಕರ್ಯ ದೊರಕಿಸಿಕೊಡಬೇಕು. ಕೂಲಿಕಾರರ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡಬೇಕು. ಹದಗೆಟ್ಟಿರುವ ರಸ್ತೆ ದುರಸ್ತಿಗೊಳಿಸಬೇಕು. ಬರಗಾಲದಲ್ಲಿ ಉದ್ಯೋಗ ನೀಡಿ ಜನರ ಬದುಕು ರಕ್ಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಂಘದ ಸಿ.ಕುಮಾರಿ, ಎಂ.ಪುಟ್ಟಮಾದು, ಡಿ.ಹನುಮೇಶ್, ಅಮಾಸಯ್ಯ, ಆರ್.ರಾಜು, ಎಂ.ಎಸ್.ಸಂತೋಷ, ರಾಜೇಶ್ವರಿ, ಮಂಜುಳಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net