

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಿರಂತರ ಸಫಲವಾಗಿದೆ. ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಪದವಿಗೆ ಮಾತ್ರ ಸೀಮಿತರಾಗದೆ, ತಾವು ಅಪೇಕ್ಷಿಸಿದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಮತ್ತಷ್ಟು ಬೆಳೆಯಬೇಕು.ಸೇವೆಯಲ್ಲಿ ಶ್ರೇಷ್ಠತೆ, ಶ್ರೇಷ್ಠತೆಯಲ್ಲಿ ಯಶಸ್ಸು ಎಂಬುದು ನಿಮ್ಮ ಆದ್ಯತೆಯಾಗಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಆಶಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ 2021ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ‘ಸಂಪನ್ನಂ’ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ನಾತಕೋತ್ತರ ವಿಭಾಗದ ಡೀನ್ ಡಾ. ಪ್ರಶಾಂತ್ ಜೈನ್, ಪದವಿ ವಿಭಾಗದ ಡೀನ್ ಡಾ.ಸಪ್ನ ಕುಮಾರಿ, ತರಗತಿ ಸಂಯೋಜಕಿ ಡಾ.ರೋಹಿಣಿ ಪುರೋಹಿತ್ ಮತ್ತು ಡಾ. ವಿನೀತಾ ಡಿಸೋಜ ಉಪಸ್ಥಿತರಿದ್ದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಸಜಿತ್ ಎಂ. ಸ್ವಾಗತಿಸಿದರು. ಡಾ.ವಿಜಯಲಕ್ಷ್ಮೀ ವಂದಿಸಿದರು. ಡಾ.ಗೀತಾ ನಿರೂಪಿಸಿದರು.