ಸಂಪತ್ ನಾಯಕ್, ಮಾಳನಾಯಕ್ ಅವಿರೋಧ ಆಯ್ಕೆ

IMG-20250127-WA0346
ಅರಸೀಕೆರೆ ತಾಲೂಕಿನ ಕರ್ನಾಟಕ ಬಂಜಾರ ಜಾಗೃತಿ ದಳದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತಿಪ್ಪೇಸ್ವಾಮಿ, ಸಂಪತ್ ನಾಯಕ್, ಮಾಳನಾಯಕ್ ಇತರರು ಪಾಲ್ಗೊಂಡಿದ್ದರು.
Published on

ಅರಸೀಕೆರೆ ಗ್ರಾಮಾಂತರ : ಕರ್ನಾಟಕ ಬಂಜಾರ (ಲಂಬಾಣಿ) ಜಾಗೃತಿ ದಳದ ಅರಸಿಕೆರೆ ತಾಲೂಕು ನೂತನ ಅಧ್ಯಕ್ಷರಾಗಿ ಮುದ್ದನಹಳ್ಳಿ ಸಂಪತ್ ನಾಯಕ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಮಂಗಳವಾರ ನಡೆದ ಸಭೆಯಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಮಾಳನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕುರಿತು ಚರ್ಚೆ ನಡೆಸಲಾಯಿತು. ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ರಾಜ್ಯ ಸಂಸ್ಥಾಪಕ ಅಧ್ಯಕ್ಷ ತಿಪ್ಪೇಸ್ವಾಮಿ ಅಭಿನಂದಿಸಿದರು. ಬಂಜಾರ ಜನಾಂಗವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದಿಂದ ಕೈ ಬಿಡುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net