ಸಂಪತ್​ ರಾಜ್​ಗೆ ಸಿಗಲಿಲ್ಲ ರಿಲೀಫ್​, ಜೈಲೂಟವೇ ಗತಿ

Sampathraj
Published on

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಮತ್ತು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್​ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ 66ನೇ ಸಿಸಿಎಚ್ ನ್ಯಾ.ಕಾತ್ಯಾಯನಿ ಅವರು ಸಂಪತ್ ರಾಜ್​ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ್ದಾರೆ. ಹೈಕೋರ್ಟ್​ನಲ್ಲಿ ಜಾಮೀನು ಸಿಗುವರೆಗೂ ಸಂಪತ್ ರಾಜ್​ಗೆ ಜೈಲೇಗತಿ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ತನ್ನ ಹೆಸರು ತಳುಕು ಹಾಕಿಕೊಂಡು, ಕೇಸ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸಂಪತ್ ರಾಜ್​ರನ್ನು ಸಿಸಿಬಿ ಪೊಲೀಸರು ನ.16ರಂದು ಬಂಧಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net