‘ಸಂಯಮ ಪ್ರಶಸ್ತಿ’ಗೆ ಅರ್ಜಿ ಆಹ್ವಾನ

Samyama mandali
Published on

ಬೆಂಗಳೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ 2024-25ನೇ ಸಾಲಿನ ‘ಸಂಯಮ ಪ್ರಶಸ್ತಿ’ಗೆ ಅರ್ಜಿ ಆಹ್ವಾನಿಸಿದೆ.

ವ್ಯಸನ ಮುಕ್ತ ಸಮಾಜ ನಿರ್ಮಾಣ, ಮದ್ಯ ಮತ್ತು ಮಾದಕ ವಸ್ತುಗಳಿಂದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಹಾಗೂ ಮದ್ಯ ವ್ಯಸನಗಳನ್ನು ಗುರುತಿಸಿ ಅವರ ಜೀವನ ಪರಿವರ್ತನೆಗಾಗಿ ಮತ್ತು ಪುನರ್ ವಸತಿಗಳಿಗಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆಸಕ್ತಿಯುಳ್ಳ ವ್ಯಕ್ತಿ ಹಾಗೂ ಸಂಘ ಸಂಸ್ಥೆಗಳು 2025ರ ಜನವರಿ 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ವಿಳಾಸ: ಕಾರ್ಯದರ್ಶಿಗಳು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 6ನೇ ಮಹಡಿ, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು- 560 001. ಇ-ಮೇಲ್ ವಿಳಾಸ : kar.temperancegmail.com

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net