ಸಂಯುಕ್ತ ಪಾಟೀಲ ಗೆಲುವು ಖಚಿತ

jkd sanyukta
ಜಮಖಂಡಿ ತಾಲೂಕಿನ ಕೊಣ್ಣೂರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರನ್ನು ಗ್ರಾಮದ ಪ್ರಮುಖರು ಕಂಬಳಿ ಹೊದಿಸಿ ಸನ್ಮಾನಿಸಿದರು. ಮುಖಂಡ ಬಿ.ಎಸ್. ಸಿಂಧೂರ, ಈಶ್ವರ ವಾಳೆನ್ನವರ, ಕಲ್ಲಪ್ಪ ಗಿರಡ್ಡಿ, ರವಿ ಯಡಹಳ್ಳಿ ಇತರರಿದ್ದರು.
Published on

ಜಮಖಂಡಿ: ಬಾಗಲಕೋಟೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಗೆದ್ದೆ ಗೆಲ್ಲುತ್ತಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರ ನಡೆಸಿ ಅವರು ಮಾತನಾಡಿದರು.

ಸಂಸದ ಪಿ.ಸಿ. ಗದ್ದಿಗೌಡರ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಮರೆತುಬಿಟ್ಟಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಯುಕ್ತ ಪಾಟೀಲ ಅವರ ಆಯ್ಕೆ ಅವಶ್ಯವಾಗಿದೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿವೆ. ಸಂಸದ ಪಿ.ಸಿ. ಗದ್ದಿಗೌಡರ ಅವರು 20 ವರ್ಷದ ಅವಧಿಯಲ್ಲಿ ಅಭಿವೃದ್ಧಿಯನ್ನೇ ಮರೆತುಬಿಟ್ಟಿದ್ದಾರೆ. ಸಂಯುಕ್ತ ಪಾಟೀಲ ಅವರು ಗೆಲುವಾದರೆ ಇಡೀ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವವನ್ನೇ ಸೃಷ್ಟಿಸಲಿದ್ದಾರೆ ಎಂದರು.

ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗಾಗಿ ನನಗೆ ಮತ ನೀಡುವ ಮೂಲಕ ಆಶೀರ್ವಾದ ಮಾಡಿ, ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಅಭಿವೃದ್ಧಿಯೇ ನನ್ನ ಮೂಲ ಧ್ಯೇಯವಾಗಿದೆ. ನಿಮ್ಮ ಮನೆ ಮಗಳಾಗಿ ಕಾರ್ಯ ಮಾಡುತ್ತೆನೆ ಎಂದು ಹೇಳಿದರು.

ಮುಖಂಡ ಬಿ.ಎಸ್. ಸಿಂಧೂರ ಮಾತನಾಡಿ, ಸಂಯುಕ್ತ ಪಾಟೀಲ ಅವರಲ್ಲಿ ಯುವ ನಾಯಕಿಯ ಲಕ್ಷಣಗಳಿವೆ. ಜನಸಾಮಾನ್ಯರೊಂದಿಗೆ ಬೆರೆಯುತ್ತಾ ಕ್ಷೇತ್ರದ ನಾಡಿಮಿಡಿತ ಅರಿತಿದ್ದಾರೆ. ಈ ಸಾರಿ ಲೋಕಸಭೆ ಚುನಾವಣೆಯಲ್ಲಿ ಸಂಯುಕ್ತ ಪಾಟೀಲ ಅವರು 2 ಲಕ್ಷ ಮತಗಳ ಅಂತರದಿಂದ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ. ಅದಕ್ಕೆ ಎಲ್ಲರೂ ಆಶೀರ್ವಾದ ಮಾಡಬೇಕು ಎಂದರು.

ಜವಳಿ ನಿಗಮದ ಮಾಜಿ ಉಪಾಧ್ಯಕ್ಷ ನಜೀರ್ ಕಂಗನೊಳ್ಳಿ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಡವರಿಗಾಗಿ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಇಂದು ಬಡವರು ಸಂತೋಷದಿಂದರಲು ಕಾಂಗ್ರೆಸ್ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಗಳೇ ಕಾರಣ ಎಂದರು.
ಮುತ್ತಣ್ಣ ಹಿಪ್ಪರಗಿ, ಶ್ರೀಶೈಲ ದಳವಾಯಿ, ಎನ್.ಎಸ್. ದೇವರವರ ಮಾತನಾಡಿದರು.

ಗ್ರಾಮದ ಪ್ರಮುಖರು ಕಂಬಳಿ ಹೊದಿಸಿ ಪೇಠಾ ಸುತ್ತಿ ಸಂಯುಕ್ತ ಪಾಟೀಲ ಹಾಗೂ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರನ್ನು ಸನ್ಮಾನಿಸಿದರು.
ಈಶ್ವರ ವಾಳೆನ್ನವರ, ಕಲ್ಲಪ್ಪ ಗಿರಡ್ಡಿ, ರವಿ ಯಡಹಳ್ಳಿ, ನಿಂಗಪ್ಪ ಗಸ್ತಿ, ಮಹಿಬೂಬ್ ಪೆಂಡಾರಿ, ಸಿದ್ದಪ್ಪ ಎಣ್ಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net