ಸಣಾಪುರ ರಸ್ತೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ

16 gvt 06
ಗಂಗಾವತಿ ತಾಲೂಕಿನ ಸಣಾಪುರ ಬಳಿ ಕಿಷ್ಕಿಂದಾ ಕ್ರಾಸ್ ಬಳಿ ಪೊಲೀಸ್ ಇಲಾಖೆಯಿಂದ ಸಿಸಿ ಕ್ಯಾಮೆರಾ ಅಳವಡಿಸಿರುವುದು.
Published on

ಗಂಗಾವತಿ: ತಾಲೂಕಿನ ಸಣಾಪುರದ ಬಳಿಯಲ್ಲಿ ಇತ್ತೀಚೆಗೆ ನಡೆದು ವಿದೇಶಿ ಪ್ರವಾಸಿಗರ ಮೇಲಿನ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಹೈ ಅಲರ್ಟ್ ಆಗಿದ್ದು, ಸಣಾಪುರ ಸಂಪರ್ಕದ ರಸ್ತೆಯಲ್ಲಿ ಸಿಸಿ ಕ್ಯಾಮೆರಾ ಭಾನುವಾರ ಅಳವಡಿಸಿದೆ.

ಆನೆಗೊಂದಿ, ಸಣಾಪುರ ಭಾಗದಲ್ಲಿ ದೇಸಿ ಮತ್ತು ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ರಕ್ಷಣೆ ಸಮಸ್ಯೆಯಾಗಿತ್ತು. ಪ್ರವಾಸಿಗರ ಮೇಲಿನ ಗ್ಯಾಂಗ್‌ರೇಪ್ ಮತ್ತು ಕೊಲೆಯಿಂದ ಪೊಲೀಸ್ ವೈಲ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗಿತ್ತು. ಸಿಎಂ ಸಿದ್ದರಾಮಯ್ಯ ಟ್ವಿಟ್ ಮೂಲಕ ಪ್ರವಾಸಿಗರಿಗೆ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದರು.

ರಾತ್ರಿ ಹೊತ್ತಿನಲ್ಲಿ ಗಸ್ತು ಆಯೋಜಿಸುವುದರ ಜತೆಗೆ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಗಿತ್ತು. ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕಾಗಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಮೊದಲ ಹಂತದಲ್ಲಿ ಕಡೇಬಾಗಿಲು ಚೆಕ್ ಪೋಸ್ಟ್, ಕಿಷ್ಕಿಂದ ರೆಸಾರ್ಟ್ ಕ್ರಾಸ್, ಸಣಾಪುರದ ಚೆಕ್‌ಪೋಸ್ಟ್, ಸಣಾಪುರದ ಕೆರೆ ಹತ್ತಿರ ಸಿಸಿ ಕ್ಯಾಮೆರಾ ಹಾಕಲಾಗಿದೆ. ಕ್ಯಾಮೆರಾ ನಿರ್ವಹಣೆಗೆ ಪ್ರತ್ಯೇಕ ಸಿಬ್ಬಂದಿ ಜತೆಗೆ ನಿತ್ಯವೂ ಗಮನಿಸುವ ವ್ಯವಸ್ಥೆ ಮಾಡಲಾಗಿದೆ.

ಈ ಬಗ್ಗೆ ಗ್ರಾಮೀಣ ಪಿಐ ರಂಗಪ್ಪ ದೊಡ್ಮನಿ ಮಾತನಾಡಿ, ಪ್ರವಾಸಿಗರಿಗೆ ರಕ್ಷಣೆ ಜತೆಗೆ ಅಕ್ರಮ ಚಟುವಟಿಕೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರವಾಸಿತಾಣದಲ್ಲಿ ಪ್ರವಾಸಿಗರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದ್ದು, ರೆಸಾರ್ಟ್ ಮಾಲೀಕರು ಸೂಕ್ಷ್ಮ ಪ್ರದೇಶಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net