

ಬಂಟ್ವಾಳ: ಬಿ.ಸಿ.ರೋಡ್‌ನ ಸಂಚಯಗಿರಿ ನಾಗರಿಕ ಕ್ರಿಯಾ ಸಮಿತಿ ಆಶ್ರಯದಲ್ಲಿ ಸಂಚಯ ಮೆಲೋಡಿಸ್‌ಗೆ ಚಾಲನೆ ನೀಡಲಾಯಿತು. ಗಾಯಕ, ಎಲ್‌ಐಸಿ ಆಡಳಿತಾಧಿಕಾರಿ ರವಿ ಕುಮಾರ್ ಹಾಸನ ಕಾರ್ಯಕ್ರಮ ಉದ್ಘಾಟಿಸಿದರು. ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು.
ನಾಗರಿಕ ಕ್ರಿಯಾ ಸಮಿತಿಯ ಉಪಾಧ್ಯಕ್ಷೆ ತಾಯಮ್ಮ, ಕೋಶಾಧಿಕಾರಿ ಎ.ದಾಮೋದರ್, ಕ್ರೀಡಾ ಕಾರ್ಯದರ್ಶಿ ಧನಂಜಯ ಬಾಳಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಸುಧಾಕರ ಸಾಲ್ಯಾನ್ ಸ್ವಾಗತಿಸಿದರು. ಕೋಶಾಧಿಕಾರಿ ಎ.ದಾಮೋದರ ವಂದಿಸಿದರು. ಸತೀಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಕರೋಕೆ ಹಾಡುಗಳ ಸಂಗೀತಾ ಕಾರ್ಯಕ್ರಮ ನಡೆಯಿತು.