ಮೋಂತಿಮಾರು ದೇವಳಕ್ಕೆ ಸಹಾಯಧನ ಮಂಜೂರಾತಿ

New Project (9)
Published on

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ, ಬಂಟ್ವಾಳ ತಾಲೂಕಿನ ಮಂಚಿ ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಂಜೂರಾದ 3 ಲಕ್ಷ ರೂ. ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾ ಕಚೇರಿ ವಿಟ್ಲದ ಯೋಜನಾಧಿಕಾರಿ ರಮೇಶ್ ದೇವಸ್ಥಾನದ ಸಮಿತಿ ಅಧ್ಯಕ್ಷ ಸತೀಶ್ಚಂದ್ರ ಅವರಿಗೆ ಹಸ್ತಾಂತರ ಮಾಡಿದರು.

ಮಂಚಿ ಒಕ್ಕೂಟ ಅಧ್ಯಕ್ಷ ದಿವಾಕರ ನಾಯಕ್, ಗಣೇಶ್ ಕಾಮತ್, ಪುಷ್ಪ ಕಾಮತ್, ಆಶಾ ಪ್ರಭು, ಜ್ಯೋತಿ ಪ್ರಭು, ಮಾಲತಿ ಭಟ್, ಅರುಣಾ ನಾಯಕ್, ಅಶೋಕ್ ನಾಯಕ್, ಸಾಲೆತ್ತೂರು ವಲಯ ಮೇಲ್ವಿಚಾರಕಿ ಸವಿತಾ, ಶಶಿಕಲಾ ಸೇವಾಪ್ರತಿನಿಧಿ ಚಂಚಲಾಕ್ಷಿ, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net