

ಮಂಗಳೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಸೋಮೇಶ್ವರ ಸಮುದ್ರ ತೀರದಲ್ಲಿ ಮರಳು ಕಲಾಕೃತಿ ರಚಿಸಲಾಯಿತು.
ದೇಶಾದ್ಯಂತ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳು ಜರುಗುತ್ತಿದ್ದು ಅದರ ಅಂಗವಾಗಿ ಎಬಿವಿಪಿ ಮರಳು ಕಲಾಕೃತಿಯ ಮೂಲಕ ವಿಶೇಷವಾಗಿ ಸಂಭ್ರವನ್ನು ಆಚರಿಸಿತು. ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಪ್ರಮುಖ್ ಕೇಶವ ಬಂಗೇರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಚಿನ್ ಕುಳಗೇರಿ, ಜಿಲ್ಲಾ ಸಂಚಾಲಕ ಶ್ರೇಯಸ್ ಶೆಟ್ಟಿ, ಪ್ರಮುಖರಾದ ಅಭಿ, ಸ್ಕಂದ ಕಿರಣ, ಆದರ್ಶ ಉಪ್ಪಾರ, ಶ್ರೀಪಾದ ತಂತ್ರಿ, ಮೇಘನಾ, ಪ್ರತೀಕ್ಷಾ, ಹರ್ಷಿತಾ ಮೊದಲಾದವರು ಉಪಸ್ಥಿತರಿದ್ದರು.