

ರಾಣೆಬೆನ್ನೂರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1800 ರೂ. ಮೌಲ್ಯದ 2 ಮೆಟ್ರಿಕ್ ಟನ್ ಮರಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತಾಲೂಕಿನ ಹೀಲದಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಮಲ್ಲಿಕಾರ್ಜುನ ಫಕ್ಕೀರಪ್ಪ ಬಾರ್ಕಿ (30) ಎಂಬುವನು ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಲಾರಿ, ಮರಳು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.