

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜಿ.ನಟರಾಜು ಮಾರ್ಗದಲ್ಲಿ ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಕೆ.ಸಂಧ್ಯಾ ಅವರು ಇಂಗ್ಲಿಷ್ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಪ್ರಬಂಧವನ್ನು ಪಿಎಚ್.ಡಿ ಪದವಿಗೆ ಅಂಗೀಕರಿಸಲಾಗಿದೆ ಎಂದು ಮುಕ್ತ ವಿವಿ ಪರೀಕ್ಷಾಂಗ ಕುಲಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.