ಸಂಡೂರಿಗೆ ಬಿಜೆಪಿ ನಾಯಕರ ಕೊಡುಗೆ ಏನು?

Sandur Congress prachara
ಸಂಡೂರು ತಾಲೂಕು ಕೃಷ್ಣಾನಗರದಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದರು. ಸಂಸದ ಈ.ತುಕಾರಾಮ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಜಿಪಂ ಮಾಜಿ ಸದಸ್ಯ ಅಕ್ಷಯ ಲಾಡ್ ಇತರರಿದ್ದರು.
Published on

ಸಂಡೂರು: ತಾಲೂಕಿನ ಕೃಷ್ಣಾನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರ ಪರ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೋಮವಾರ ಪ್ರಚಾರ ನಡೆಸಿದರು.

ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಶ್ರೀರಾಮುಲು, ಕರುಣಾಕರ ರೆಡ್ಡಿ, ಮಾಜಿ ಸಂಸದರಾದ ಶಾಂತಾ, ದೇವೇಂದ್ರಪ್ಪ ಅವರು ಸಂಡೂರಿಗೆ ನೀಡಿದ ಕೊಡುಗೆ ಏನು. ಬಿಜೆಪಿಯವರು ಇಲ್ಲಸಲ್ಲದನ್ನು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಮಾಜಿ ಶಾಸಕ ಅನಿಲ್ ಲಾಡ್ ನಮ್ಮ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರು ನಮ್ಮಣ್ಣ. ಸಂಡೂರಿನ ಪ್ರಜ್ಞಾವಂತ ಮತದಾರರು ಆಲೋಚನೆ ಮಾಡಲಿ. ಹತ್ತು ವರ್ಷಗಳಿಂದ ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಅಧಿಕಾರದಲ್ಲಿದ್ದು, ದೇಶದ ರೈತರಿಗೆ ಏನು ನೀಡಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಟೀಕಿಸಿದರು.

ಭುಜಂಗನಗರದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ದೇಶದಲ್ಲಿಯೇ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಪಾವತಿಸುತ್ತಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಅಲ್ಪ ಪಾಲು ನೀಡುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್, ಸಂಸದ ಸಾಗರ್ ಖಂಡ್ರೆ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಮಾತನಾಡಿದರು. ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net