ಕಲುಷಿತ ನೀರು ಕೆರೆಗೆ ಹರಿಸದಿರಿ

sandur lake fish death
ಕಲುಷಿತ ನೀರಿನಿಂದ ಸತ್ತಿರುವ ಮೀನುಗಳು.
Published on

ಸಂಡೂರು: ತೋರಣಗಲ್ ಹೊರ ವಲಯದಲ್ಲಿರುವ ಹಳ್ಳಕ್ಕೆ ಕಾರ್ಖಾನೆಗಳ ರಾಸಾಯನಿಕಯುಕ್ತ ಕಲುಷಿತ ನೀರು ಹರಿಸಿದ್ದರಿಂದ ಮೀನುಗಳು ಸತ್ತಿವೆ. ಇದೇ ಹಳ್ಳದ ನೀರು ದರೋಜಿ ಕೆರೆ ಸೇರುತ್ತಿರುವುದರಿಂದ ಕೆರೆಯೂ ಕಲುಷಿತಗೊಳ್ಳುತ್ತಿದೆ. ಈ ಮೂಲಕ ಪ್ರಾಣಿ, ಪಕ್ಷಿಗಳು ದನ-ಕರು, ಕುರಿಗಳು ಸಾಯುವ ಸಂಭವವಿದೆ.

ಜಿಲ್ಲಾಡಳಿತವು ಕಲುಷಿತ ನೀರನ್ನು ಹಳ್ಳಕ್ಕೆ ಬಿಡದಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆರೆಯ ಅಚ್ಚುಕಟ್ಟು ಪ್ರದೇಶದ ಜಮೀನುಗಳಲ್ಲಿ ಇಳುವರಿ ಕುಂಠಿತವಾಗುತ್ತಿದೆ. ನೀರಾವರಿ ಭೂಮಿ ಬರಡಾಗಲಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net