ಹಳ್ಳಿಗಳ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಿ

Sandur grama utkarsh programe
ಸಂಡೂರಿನಲ್ಲಿ ಆಯೋಜಿಸಿದ್ದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮವನ್ನು ತಾಪಂ ಇಒ ಮಡಗಿನ ಬಸಪ್ಪ ಉದ್ಘಾಟಿಸಿದರು. ತಹಸೀಲ್ದಾರ್ ಅನಿಲ್ ಕುಮಾರ, ಎಸ್ಟಿ ಕಲ್ಯಾಣಾಧಿಕಾರಿ ರಂಗನಾಥ ಮುತಾಲಿಕ ದೇಸಾಯಿ ಇತರರಿದ್ದರು.
Published on

ಸಂಡೂರು: ಗ್ರಾಮಗಳಿಗೆ ಸರ್ಕಾರ ಮೂಲ ಸೌಕರ್ಯಗಳನ್ನು ಒದಗಿಸಿದಾಗ ನಿಜವಾದ ಅರ್ಥದಲ್ಲಿ ಮಹಾತ್ಮ ಗಾಂಧಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಸಾಕಾರ ಆಗುತ್ತದೆ ಎಂದು ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ, ತಾಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಧರ್ತಿ ಅಭಾ ಜನಜಾತೀಯ ಗ್ರಾಮ ಉತ್ಕರ್ಷ ಕಾರ್ಯಕ್ರಮ ಉದ್ಘಾಟಿಸಿ ಸೋಮವಾರ ಮಾತನಾಡಿದರು. ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಮಟ್ಟದ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ಪರಿಶಿಷ್ಟರು ಸೇರಿದಂತೆ ಎಲ್ಲ ಸಮುದಾಯದ ಬಡವರಿಗೆ ಅನುಕೂಲ ಕಲ್ಪಿಸುವುದು ಸರ್ಕಾರಿ ಅಧಿಕಾರಿಗಳ ಮೂಲ ಧ್ಯೇಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಅನಿಲ್ ಕುಮಾರ ಮಾತನಾಡಿ, ಸಂಡೂರು ತಾಲೂಕಿನ 14 ಗ್ರಾಪಂಗಳ ಪರಿಶಿಷ್ಟ ಪಂಗಡದವರು ಶೇ.50ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಗಳನ್ನು ಆಯ್ಕೆ ಮಾಡಿ ಆ ಹಳ್ಳಿಯ ಅಧಿಕಾರಿಗಳಿಗೆ ತರಬೇತಿ ಆಯೋಜಿಸಲಾಗಿದೆ ಎಂದರು.

ಎಸ್ಟಿ ಕಲ್ಯಾಣಾಧಿಕಾರಿ ರಂಗನಾಥ ಮುತಾಲಿಕ ದೇಸಾಯಿ ಮಾತನಾಡಿ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಸರ್ಕಾರ 17ಪ್ರಮುಖ ಇಲಾಖೆಗಳ ಸಹಯೋಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ ಎಂದರು. ಬಿಆರ್‌ಪಿ ಮಂಜುನಾಥ ಹಾದಿಮನಿ, ಪಿಡಿಒಗಳು, ಗ್ರಾಮಲೆಕ್ಕಿಗರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net