ಹೆಚ್ಚು ಅಂಕ ಪಡೆದರೆ ಶೈಕ್ಷಣಿಕ ಪ್ರವಾಸ

15-SanduruP1
Published on

ಸಂಡೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 622ಕ್ಕೂ ಅಧಿಕ ಅಂಕ ಪಡೆವ ವಿದ್ಯಾರ್ಥಿಗಳನ್ನು ಮೂರು ದಿನಗಳ ಶೈಕ್ಷಣಿಕ ಪ್ರವಾಸಕ್ಕೆ ಕಳಿಸಲಾಗುವುದು ಕ್ಷೇತ್ರಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ಹೇಳಿದರು.

ಪಟ್ಟಣದ ಆದರ್ಶ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಂಡೂರು ಹಾಗೂ ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆ್ಯಂಡ್ ಕಾಮರ್ಸ್ ಇವರ ಸಂಯುಕ್ತಾಶ್ರಯದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಶಿಬಿರ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಕಷ್ಟಪಟ್ಟರೆ ಭವಿಷ್ಯದ ಬದುಕು ಉತ್ತಮವಾಗಿರುತ್ತದೆ ಎಂದರು.

ಮನಶಾಸ್ತ್ರಜ್ಞ ಡಾ.ಎ.ಎಲ್. ವಿನಯ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಸೌಲಭ್ಯಗಳ ಸದುಪಯೋಗ ಪಡೆದು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದರು.

ಟಿಎಂಎಇಎಸ್ ಮುಖ್ಯಸ್ಥರಾದ ನಾಗರಾಜ, ವಿಶ್ವನಾಥ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆವ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿಯಲ್ಲಿ ಶಿಕ್ಷಣ ನೀಡಲಾಗುವುದು ಎಂದು ತಿಳಿಸಿದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಖರಾವ್ ಮಾತನಾಡಿದರು. ಶಿಕ್ಷಣ ಸಂಯೋಜಕ ಸಿ.ಬಸವರಾಜ್, ಶಿಕ್ಷಣ ಇಲಾಖೆಯ ವೃಂದ ಸಂಘಗಳ ಅಧ್ಯಕ್ಷ ಕೆ. ಕುಮಾರಸ್ವಾಮಿ, ಕೆ.ಕೊಟ್ರಪ್ಪ, ಟಿ.ಎಂ.ಪುರುಷೋತ್ತಮ, ಮುಖ್ಯಶಿಕ್ಷಕರಾದ ಎಚ್.ಎನ್. ಬೋಸ್ಲೆ, ರೂಪಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net