ಚಿಕಿತ್ಸಾಲಯ ಕೂಡಲೇ ಆರಂಭಿಸಿ

17092022 Sandur CITU APPEL
Published on

ಸಂಡೂರು: ತಾಲೂಕಿಗೆ ಮಂಜೂರಾದ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ ಕೂಡಲೇ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕ ಇಲಾಖೆ ಸಹಾಯಕ ಪರಶುರಾಮ್‌ಗೆ ಸಿಐಟಿಯು ಮುಖಂಡರು ಮನವಿ ಸಲ್ಲಿಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯಬಾಬು ಮಾತನಾಡಿ, ನೌಕರರ ವೇತನದಿಂದ ಕಡಿತಗೊಳಿಸುವ ಮೂಲಕ ಪ್ರತಿ ತಿಂಗಳು 1.30 ಕೋಟಿ ರೂ. ಇಎಸ್‌ಐಸಿ ಸಂಸ್ಥೆಗೆ ಸಂದಾಯ ಮಾಡಲಾಗುತ್ತಿದೆ. ಅದರಲ್ಲಿ ಸಂಡೂರು ತಾಲೂಕಿನ ಸಿಂಹಪಾಲು ಸೇರಿದೆ. ಆರೋಗ್ಯ ಚಿಕಿತ್ಸೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 100 ಹಾಸಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಳ್ಳಾರಿ ಹಾಗೂ ಸಂಡೂರಿನಲ್ಲಿ 50 ಹಾಸಿಗೆ ಆಸ್ಪತ್ರೆ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ ಮಂಜೂರಾಗಿದೆ. ಆದರೆ ಇನ್ನೂ ಪ್ರಾರಂಭವಾಗಿಲ್ಲ. ಕೂಡಲೇ ಆರಂಭಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಸಂಚಾಲಕ ಜೆ.ಎಂ.ಚೆನ್ನಬಸಯ್ಯ, ಕಟ್ಟಡ ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷ ವಿ.ದೇವಣ್ಣ, ಸಿಪಿಐ(ಎಂ) ಕಾರ್ಯದರ್ಶಿ ಎ.ಸ್ವಾಮಿ, ಕಾರ್ಮಿಕ ಸಂಘಟನೆಯ ಬಾಬಯ್ಯ, ಹನುಮಂತ, ದೇವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net