ಜ್ಞಾನ ಸಮಾಜದ ಉದ್ಧಾರಕ್ಕೆ ಬಳಸಿ

SanduruP1
ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಅವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಅನಾವರಣಗೊಳಿಸಿದರು. ಎಂಎಲ್ಸಿ ಹೇಮಲತಾ ನಾಯಕ್, ಕುಲಸಚಿವ ಎಸ್.ಎನ್.ರುದ್ರೇಶ್, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಬಿ.ರವಿ ಇತರರಿದ್ದರು.
Published on

ಸಂಡೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಆದರ್ಶಗಳನ್ನು ಸಾರಿದ್ದು, ಅವರ ಪುತ್ಥಳಿ ಅನಾವರಣ ವಿದ್ಯಾರ್ಥಿಗಳಿಗೆ ಪ್ರೇರಣೆಯ ಸಂಕೇತವಾಗಿದೆ ಎಂದು ವಿಎಸ್‌ಕೆ ವಿವಿ ಕುಲಪತಿ ಪ್ರೊ.ಎಂ.ಮುನಿರಾಜು ಹೇಳಿದರು.

ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಅವರಣದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದರು. ಯುವ ಸಮೂಹವು ಬುದ್ಧ, ಬಸವ, ಅಂಬೇಡ್ಕರ್ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು.

ಸಾಮಾಜಿಕ ಮಾಧ್ಯಮಗಳಿಗೆ ಮಾರುಹೋಗದೆ ನಿರಂತರ ಅಭ್ಯಾಸದ ಮೂಲಕ ಸುಂದರ ಜೀವನ ರೂಪಿಸಿಕೊಳ್ಳಬೇಕು. ಶಿಕ್ಷಣ ಮತ್ತು ಸಬಲೀಕರಣದ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವುದೇ ನಮ್ಮ ವಿಶ್ವವಿದ್ಯಾಲಯದ ಗುರಿಯಾಗಿದೆ. ವಿದ್ಯಾರ್ಥಿಗಳು ಜ್ಞಾನವನ್ನು ಸಮಾಜದ ಉದ್ಧಾರಕ್ಕೆ ಬಳಸಬೇಕು ಎಂದು ಕರೆ ನೀಡಿದರು.

ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಅಂಬೇಡ್ಕರ್ ಅವರ ತತ್ವಗಳು ಇಂದಿಗೂ ಸಮಾಜಕ್ಕೆ ಹಾಗೂ ಯುವಕರಿಗೆ ಮಾರ್ಗದರ್ಶಿಯಾಗಿದ್ದು, ಅವರು ಪ್ರತಿಪಾದಿಸಿದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಕಿಚ್ಚು ಸಾಮಾಜಿಕ ಪರಿವರ್ತನೆಯ ಕೀಲಿಯಾಗಿದೆ ಎಂದರು.

ಕುಲಸಚಿವ ಎಸ್.ಎನ್.ರುದ್ರೇಶ್, ಕುಲಸಚಿವ(ಮೌಲ್ಯಮಾಪನ) ಪ್ರೊ.ಎನ್.ಎಂ.ಸಾಲಿ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಬಿ.ರವಿ, ಸಹಾಯಕ ಪ್ರಾಧ್ಯಾಪಕ ಕರಿಗೋಳೇಶ್ವರ, ಕೆಂದ್ರದ ಅಧಿಕಾರಿಗಳಾದ ಕೆ.ಜಿ.ಸುಮಾ, ವಿ.ಎ.ಚೌಡಪ್ಪ, ಕುಮಾರ್, ಶಿವರಾಮ ರಾಗಿ, ಅಧ್ಯಾಪಕರಾದ ಡಾ.ಮಲ್ಲಯ್ಯ, ಕೃಷ್ಣ ಅಣ್ಣಾಜಿ, ಖನಿಜ ಸಂಸ್ಕರಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಸ್.ಎಂ.ಶಶಿಧರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net