ಸಾವಿತ್ರಿಬಾಯಿ ಫುಲೆ ಆದರ್ಶ ಮೈಗೂಡಿಸಿಕೊಳ್ಳಿ

Untitled design
ಸಂಡೂರಿನ ಶ್ರೀಶೈಲೇಶ್ವರ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಾವಿತ್ರಿಬಾಯಿ ಫುಲೆ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ಪ್ರಶಿಕ್ಷಣ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Published on

ಸಂಡೂರು: ಅವಿದ್ಯಾವಂತೆಯಾಗಿದ್ದ ಸಾವಿತ್ರಿಬಾಯಿ ಫುಲೆಗೆ ಪತಿ ಜ್ಯೋತಿರಾವ್ ಫುಲೆ ಶಿಕ್ಷಣ ಕೊಡಿಸುವ ಮೂಲಕ ಮಹಿಳೆಯರು ವಿದ್ಯೆಕಲಿಯಲು ಅರ್ಹರು ಎಂಬುದನ್ನು ತೋರಿಸಿಕೊಟ್ಟರು ಎಂದು ಜಿಪಂ ನಿವೃತ್ತ ನೌಕರ ಜಿ.ಕೆ.ನಾಗರಾಜ ಹೇಳಿದರು.

ಪಟ್ಟಣದ ಶ್ರೀಶೈಲೇಶ್ವರ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಜನಸಂಗ್ರಾಮ ಪರಿಷತ್ ಹಾಗೂ ರೈತ ಸಂಘ ಜಂಟಿಯಾಗಿ ಹಮ್ಮಿಕೊಂಡಿದ್ದ ಬಿ.ಇಡಿ ವಿದ್ಯಾರ್ಥಿಗಳಿಗೆ ಸಾವಿತ್ರಿಬಾಯಿ ಫುಲೆ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾವಿತ್ರಿಬಾಯಿ ಫುಲೆ ದೇಶದ ಮೊಟ್ಟ ಮೊದಲ ಶಿಕ್ಷಕಿಯಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಿಂದುಳಿದವರಿಗೆ ಗಗನ ಕುಸುಮವಾಗಿದ್ದ ಶಿಕ್ಷಣವನ್ನು ಕೈಗೆಟುಕುವಂತೆ ಮಾಡಿದರು. ಅವರ ಆದರ್ಶಗಳನ್ನು ಅಳವಡಿಕೊಳ್ಳಬೆಕು ಎಂದರು.

ಜನಸಂಗ್ರಾಮ ಪರಿಷತ್ ಅಧ್ಯಕ್ಷ ಟಿ.ಎಂ.ಶಿವಕುಮಾರ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳನ್ನು ಕೇವಲ ಪಠ್ಯಕ್ಕೆ ಸೀಮಿತಗೊಳಿಸಬಾರದು. ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ನೆಲ, ಜಲ, ಪರಿಸರ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ಪರಿಷತ್ ಸಂಚಾಲಕ ಚಾಗನೂರು ಮಲ್ಲಿಕಾರ್ಜುನ ರೆಡ್ಡಿ ಮಾತನಾಡಿ, ಸ್ವಾತಂತ್ರ್ಯ ಕಾಲಘಟ್ಟದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯಲ್ಲಿ ಮಂಚೂಣಿಯಲ್ಲಿದ್ದಂತಹ ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವರಂತೆ ಆಗಬೇಕು ಎಂದರು. ಪರಿಷತ್‌ನ ಶ್ರೀಶೈಲ ಆಲದಳ್ಳಿ, ಈರಣ್ಣ ಮೂಲೆಮನಿ, ಟಿ.ಕೆ.ಮಂಜುನಾಥ, ರೈತ ಸಂಘದ ರಾಜ್ಯಾಧ್ಯಕ್ಷ ಕರೂರು ಮಾಧವರೆಡ್ಡಿ, ಪ್ರಮುಖರಾದ ಸಲೀಂ ಸಂಜೀವರೆಡ್ಡಿ, ಬಿ.ಇಡಿ ವಿಭಾಗದ ಪ್ರಾಚಾರ್ಯ ದೇವರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net