ನಗದುರಹಿತ ಸೇವೆ ಜಾರಿಯಾಗಲಿ

230922 Sanduru construction worker
ಸಂಡೂರಿನ ಕಾರ್ಮಿಕ ಇಲಾಖೆ ಕಚೇರಿಯ ಡಿಇಒ ಪರಶುರಾಮ್‌ಗೆ ಕಟ್ಟಡ ಕಾರ್ಮಿಕರಿಂದ ಮನವಿಪತ್ರ ಸಲ್ಲಿಸಲಾಯಿತು.
Published on

ಸಂಡೂರು: ಸ್ಲಂ ಬೋರ್ಡ್ ಸೇರಿ ಸರ್ಕಾರ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡುವುದನ್ನು ತಡೆಯಬೇಕು. ನಿರಂತರವಾಗಿ ನಡೆಯುತ್ತಿರುವ ವಿವಿದ ಖರೀದಿಗಳನ್ನು ನಿಲ್ಲಿಸಲು ಒತ್ತಾಯಿಸಿ ಪಟ್ಟಣದ ಕಾರ್ಮಿಕ ನಿರೀಕ್ಷಕರ ಕಚೇರಿಯ ಡಿಇಒ ಪರಶುರಾಮ್‌ಗೆ ಕಾರ್ಮಿಕರು ಮನವಿ ಸಲ್ಲಿಸಿದರು.

ಕೊಳಚೆ ನಿರ್ಮೂಲನೆ ಮಂಡಳಿಗೆ ಪಾವತಿಸಲಾದ 76 ಕೋಟಿ ರೂ.ವನ್ನು ಕೂಡಲೇ ಕಾರ್ಮಿಕ ಮಂಡಳಿ ಖಾತೆಗೆ ವಾಪಸ್ ಪಡೆಯಲು ಅಗತ್ಯ ಕ್ರಮವಹಿಸಬೇಕು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿ ಸದಸ್ಯರಾಗಿ 5 ವರ್ಷ ಪೂರೈಸಿದವರಿಗೆ ಮಾತ್ರವೇ ಮನೆ ನಿರ್ಮಾಣಕ್ಕೆ ಸಾಲ/ಸಹಾಯಧನ/ ಮುಂಗಡ ಹಣ ಪಾವತಿ ಮಾಡಲು ಕ್ರಮವಹಿಸಬೇಕು. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸರ್ಕಾರದ ಆರೋಗ್ಯ ಸಂಜೀವಿನಿ 2021 ನಗದು ರಹಿತ ಸೇವೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net