

ಸಂಡೂರು: ವಿದ್ಯಾರ್ಥಿ ಜೀವನದಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಿವಪುರ ಶಿಕ್ಷಣ ಸಂಸ್ಥೆಯ ಆಶಿಯಾ ಬಾನು ಹೇಳಿದರು.
ಇಲ್ಲಿನ ಎಸ್‌ಆರ್‌ಎಸ್ ಶಾಲೆಯಲ್ಲಿ ಆಯೋಜಿಸಿರುವ ಮೂರು ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ಶುಕ್ರವಾರ ಮಾತನಾಡಿದರು.
ವಿವಿಧ ಕೌಶಲ, ದಕ್ಷತೆ, ಪ್ರಾಮಾಣಿಕ ಪ್ರಯತ್ನ, ಸತತ ಅಧ್ಯಯನ ರೂಢಿಸಿಕೊಂಡರೆ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.
ಎಸ್‌ಇಎಸ್ ಕಾರ್ಯದರ್ಶಿ ಡಾ.ಜಗದೀಶ್ ಬಸಾಪುರ ಮಾತನಾಡಿ, ವಿದ್ಯಾರ್ಥಿಗಳು 6ನೇ ತರಗತಿಯಿಂದಲೇ ಓದುವ ಕೌಶಲ ಬೆಳೆಸಿಕೊಳ್ಳಬೇಕು. ನವೋದಯ ಶಾಲೆ ಸೇರಿ ಇತರ ಪರೀಕ್ಷೆಗಳಲ್ಲಿ ಪಾಸಾಗಲು ಸಹಕಾರಿಯಾಗಲಿದೆ ಎಂದರು.
ಹಗರಿಬೊಮ್ಮನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಾನ್ಯಾಸಕ ಗೂಳಪ್ಪ ಹುಲಿಮನೆ ಮಾತನಾಡಿದರು. ಪ್ರಾಚಾರ್ಯ ಬಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.